ಸುದ್ದಿಬಿಂದು ಬ್ಯೂರೋ
ಹಾವೇರಿ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪಾಪಿ ತಮ್ಮನೇ, ಸ್ವಂತ ಅಣ್ಣ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮೂವರನ್ನ ಬರ್ಬರವಾಗಿ ಹತ್ಯೆಗೈದಿರುವ ಆರೋಪ ಹಾನಗಲ್ ತಾಲೂಕಿನ ಯಳ್ಳೂರಿನಲ್ಲಿ ಕೇಳಿಬಂದಿದೆ.

ಗೀತಾ ಮರಿಗೌಡ್ರು (32), ಅಕುಲ್ (10), ಅಂಕಿತಾ (7) ಭೀಕರವಾಗಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಬೆಳಗಿನ ಜಾವ 3.30 ರ ಸುಮಾರಿನಲ್ಲಿ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಕುಮಾರಗೌಡ್ ಮರಿಗೌಡ್ರು (35)ಎಂಬುವ ಮೈದುನನೇ ಕೊಲೆ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಕೊಲೆಯಾಗಿರುವ ಗೀತಾ ಪತಿ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಕೊಲೆ ಮಾಡಿದ್ದಾನೆ ‌ಎಂದು ಹೇಳಲಾಗುತ್ತಿರುವ ಮೈದುನ ಕುಮಾರಗೌಡ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ, ಹಾನಗಲ್ ಸಿಪಿಐ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.