ಸುದ್ದಿಬಿಂದು ಬ್ಯೂರೋ
ಶಿರಸಿ : ರಾಜ್ಯ ಕಾಂಗ್ರೆಸ್ ಸರಕಾರ(State Congress Government,) ಮದ್ಯದ ಬೆಲೆ ಏರಿಕೆ(Liquor Price) Rise, ಮಾಡಿ ಆ ಹಣದಲ್ಲೇ ಗೃಹ ಲಕ್ಷ್ಮೀ(Grilahakshmi) ಮೂಲಕ ಮಹಿಳೆಯರಿಗೆ ಎರಡು ಸಾವಿರ ನೀಡುತ್ತಿದ್ದಾರೆ‌.ಸಮರ್ಥ ಅಧಿಕಾರ ನಡೆಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ‌ ಎಂದು ಸಂಸದ ಬಿ ವೈ ರಾಘವೇಂದ್ರ(BY Raghavendra) ಅವರು ವಾಗ್ದಾಳಿ ನಡೆಸಿದ್ದಾರೆ.

ಉತ್ತರಕನ್ನಡ( Uttara Kannada)ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕಾಗಿ ಶಿರಸಿಗೆ(sirsi) ಆಗಮಿಸಿದ ವೇಳೆ ಶಿರಸಿಯಲ್ಲಿ ಸುದ್ದಿಗೋಷ್ಠಿಯನ್ನ ನಡೆಸಿ ಮಾತನಾಡಿದ ಬಿ ವೈ ರಾಘವೇಂದ್ರ ಅವರು ಸಾರ್ವಜನಿಕರಿಗೆ ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಈಗ ಜನರಿಗೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ತಪ್ಪು‌ಮಾಡಿದ್ದೇವೆ ಎನ್ನುವುದು ಅರ್ಥವಾಗಿದೆ..

ಅನೇಕ ವರ್ಷಗಳ ನಂತರ ರಾಜ್ಯಕ್ಕೆ ಬಹಳ ಕೆಟ್ಟ ಪರಿಸ್ಥಿತಿ‌ ಬಂದಿದೆ.ರೈತರ-ಬಡವರ ಅಭಿವೃದ್ದಿಗೆ ಪೂರಕ ಯೋಜನೆ ನೀಡದೆ ಕಾಂಗ್ರೆಸ್ ಸಮಯ ವ್ಯರ್ಥದ ಆಡಳಿತ ನಡೆಸುತ್ತಿದೆ.ಸಿಎಂ ಸಿದ್ದರಾಮಯ್ಯ(CM Siddaramaiah) ಕೇವಲ ಪ್ರಧಾನಿ ಮೋದಿ(Prime Minister Modi) -ಸಂಸದರನ್ನು ದೂರುವ ಕಾರ್ಯ ಮಾಡುತ್ತಿದ್ದಾರೆ. ರಾಜ್ಯ ಬರದಿಂದ ತತ್ತರಿಸಿ ಹೋಗಿದೆ.ಸರ್ಕಾರ ಮಾತ್ರ ಬರ ಪರಿಸ್ಥಿತಿಯನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರ ರಾಜ್ಯದ ಜನತೆಯ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಕೇವಲ ಗ್ಯಾರಂಟಿ ಯೋಜನೆ ಬಗ್ಗೆ ಭಾಷಣ ಮಾಡುತ್ತ ಸಮಯ ವ್ಯರ್ಥ ಮಾಡುತ್ತಿದೆ.ಬಡವರ ದೀಪಾವಳಿ(Diwali) ಸಂತೋಷವನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.