ಸುದ್ದಿಬಿಂದು ಬ್ಯೂರೋ
ಕಾರವಾರ : ರಾಜ್ಯ ಬಿಜೆಪಿಯಲ್ಲ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ಕೊನೆಗೂ ತೆರೆ ಬಿದ್ದಂತಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಯಡಿಯೂರಪ್ಪ ಪುತ್ರ, ಬಿವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಅಧ್ಯಕ್ಷ ‌ಸ್ಥಾನ ನೀಡಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬಿವೈ ವಿಜಯಯೇಂದ್ರ ಅವರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇನ್ನೇನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೇ ಬಿಟ್ಟರು ಅನ್ನುವಷ್ಟರ ಮಟ್ಟಿಗೆ ಹೆಸರು ಮುಂಚೂಣಿಯಲ್ಲಿತ್ತು. ವಿಜಯೇಂದ್ರ ನೇಮಕದಿಂದ ಅವರ ನಡೆ ಏನಾಗುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.ಬಿಜೆಪಿ ನಾಯಕರು ಲಿಂಗಾಯತರಿಗೆ ಪಕ್ಷದ ಅಧ್ಯಕ್ಷ ಪಟ್ಟ ಕಟ್ಟಿದ್ದು, ವಿರೋದ ಪಕ್ಷದ ನಾಯಕನ ಸ್ಥಾನಕ್ಕೆ ಸುನೀಲ್ ಕುಮಾರ ಅಥವಾ ಆರ್ ಅಶೋಕರನ್ನು ನೇಮಕ ಮಾಡುವ ಸಂಭವವಿದೆ ಎಂದು ಹೇಳಲಾಗಿದೆ