ಸುದ್ದಿಬಿಂದು ಬ್ಯೂರೋ
ಶಿರಸಿ : ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು 70ನೇ ಸಹಕಾರಿ ಸಪ್ತಾಹವನ್ನ ಟಿಎಸ್ ಎಸ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಹಕಾರ ಇಲಾಖೆ ಹಾಗೂ ಕೆಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ನಡೆಯುವ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರನ್ನ ಕೈ ಬಿಡಲಾಗಿದ್ದು ಸಹಕಾರಿ ಕ್ಷೇತ್ರದಲ್ಲಿಯೂ ರಾಜಕೀಯ ವಾಸನೆ ಬರುತ್ತಿದೆ.
ಇಂದಿನ ಕಾರ್ಯಕ್ರಮಕ್ಕಾಗಿ ಮುದ್ರಿಸಲಾಗಿರುವ ಆಮಂತ್ರಣ ಪತ್ರಿಕೆಯಲ್ಲಿಯೂ ಕೂಡ ಶಾಸಕ ಹೆಸರನ್ನ ಹಾಗೂ ಪೊಟೋ ಹಾಕದೆ ಇರುವುದು ಶಾಸಕ ಭೀಮಣ್ಣ ನಾಯ್ಕ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಮುಂದ್ರಿಸಲಾಗಿದ್ದ. ಆಮಂತ್ರಣ ಪತ್ರಿಕೆಯಲ್ಲಿ ಭೀಮಣ್ಣ ನಾಯ್ಕ ಅವರ ಹೆಸರು ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಕಾರಣ ಹೊಸದಾಗಿ ಇನ್ನೋಂದು ಆಮಂತ್ರಣ ಮುದ್ರಿಸಿ ಅದರಲ್ಲಿ ಶಾಸಕರ ಹೆಸರು ಹಾಗೂ ಪೋಟೋ ಸೇರಿಸಲಾಗಿದೆ. ಅಷ್ಟೆ ಅಲ್ಲದೆ ನಗರದಲ್ಲಿ ಅಳವಡಿಸಲಾಗಿರುವ ಬ್ಯಾನರ್ ಗಳಲ್ಲಿ ಕೂಡ ಶಾಸಕ ಪೋಟೋ ಹಾಕದೆ ತಮ್ಮಗೆ ಹೇಗೆ ಬೇಕೋ ಹಾಗೆ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎನ್ನಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಹಕಾರಿ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿರುವ ಆರ್ ವಿ ದೇಶಪಾಂಡೆ ಸೇರಿದಂತೆ ರಾಜ್ಯದ ಸಚಿವರುಗಳು ಗೈರಾಗುವ ಸಾಧ್ಯತೆ ಹೆಚ್ಚಾಗಿದೆ. ಇನ್ನೂ ಈ ಕಾರ್ಯಕ್ರಮದಲ್ಲಿ ರಾಜಕೀಯ ಪ್ರವೇಶಿಸುವಂತೆ ಅವಕಾಶ ಮಾಡಿಕೊಟ್ಟ AR ಅವರನ್ನ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬಿಜೆಪಿ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ಶಾಸಕ ಭೀಮಣ್ಣ ನಾಯ್ಕ ಅವರು ವಿರೋಧ ಮಾಡಿರುವುದೇ ಇಂದಿನ ಈ ಕಾರ್ಯಕ್ರಮದಲ್ಲಿ ಶಾಸಕರನ್ನ ಕಡೆಗಣಿಸಲಾಗಿದೆ ಎನ್ನುವ ಮಾತು ಕಾಂಗ್ರೆಸ್ ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿದೆ.