ಸುದ್ದಿಬಿಂದು ಬ್ಯೂರೋ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಟಾಟ್ ಏಸ್ ವಾಹನವೊಂದು ಪಲ್ಟಿಯಾಗಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಪಂ.ವ್ಯಾಪ್ತಿಯ ಗಾಬಿತಕೇಣಿ ನಿವಾಸಿ ಮನೋಹರ ದಶರಥ ಭೋತೆ (60) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಬೆಳಗಾವಿಗೆ ಮೀನು ತೆಗೆದುಕೊಂಡು ಹೋಗಿದ್ದು, ಅಲ್ಲಿ ಮೀನು ಖಾಲಿ ಮಾಡಿ ವಾಪಸ್ ಅಂಕೋಲಾಕ್ಕೆ ಬರುತ್ತಿದ್ದ ವೇಳೆ ಟಾಟ್‍ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.
ಚಾಲಕ ರೋಶನ್ ಭಟ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಕುರಿತು ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.