ಸುದ್ದಿಬಿಂದು ಬ್ಯೂರೋ
ಬೆಂಗಳೂರು : ನಗರದ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ(Bomb threat to school) ಬಂದಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಬಸವೇಶ್ವರ ನಗರ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಇ ಮೇಲ್ (Email)ಮೂಲಕ ಬಾಂಬ್ ಬೆದರಿಕೆ ನೀಡಲಾಗಿದೆ.ಇದರಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಉಂಟಾಗಿದೆ. ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಲಾಗಿದೆ, ಬೆದರಿಕೆ ಇರುವ ಕಾರಣ ತಕ್ಷಣ ವಿದ್ಯಾರ್ಥಿಗಳಿಗೆ ಶಾಲೆಯಿಂದ ಮನೆಗಳಿಗೆ ವಾಪಸ್ ಕಳುಹಿಸಲಾಗಿದೆ.

ಶಾಲೆಗಳಿಗೆ ಇ ಮೇಲ್ ಬಂದ ತಕ್ಷಣ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.ಇನ್ನು ಇಮೇಲ್ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ..