ಬೀದರ್: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಪರಿಹಾರ ಕೊಡಬೇಕು.ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಪರಿಹಾರವನ್ನು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರಕ್ಕೆ ಬರದ ಬಗ್ಗೆ ಚಿಂತೆ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬರ ಎದುರಿಸುವ ಕೆಲಸವನ್ನು ಸರ್ಕಾರ ಈಗಾಗಲೇ ಮಾಡಿದೆ.ಕೇಂದ್ರ ಸರ್ಕಾರಕ್ಕೆ 150 ಮಾನವ ದಿನಗಳ ಉದ್ಯೋಗ ನೀಡುವಂತೆ ಕೋರಿ ಪತ್ರವನ್ನು ಬರೆಯಲಾಗಿದೆ. ಅನುಮತಿಯನ್ನು ಕೇಂದ್ರ ಸರ್ಕಾರ ಕೊಡಬೇಕು.
ಸೆಪ್ಟೆಂಬರ್ ತಿಂಗಳಲ್ಲಿ ಮನವಿ ನೀಡಿದ ನಂತರ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡ ಬಂದು ಭೇಟಿ ನೀಡಿ ಹೋಗಿದ್ದರೂ ಈವರೆಗೆ ಯಾವುದೇ ಪರಿಹಾರ ನೀಡಿಲ್ಲ.ಮೊದಲನೇ ಹಂತದಲ್ಲಿ ರೈತರಿಗೆ 2000 ರೂ.ಗಳ ವರೆಗೆ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.
ನಮ್ಮ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ
ಛತ್ತಿಸಗಡ, ಮಧ್ಯಪ್ರದೇಶ, ತೆಲಂಗಾಣ ಗೆಲ್ಲುವ ವಿಶ್ವಾಸವಿದೆ.ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ ನಮ್ಮ ಶಾಸಕರ್ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದರು.