ಸುದ್ದಿಬಿಂದು ಬ್ಯೂರೋ
Sirsi: ಶಿರಸಿ:ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರು ಅಪಘಾತವಾಗಿ(accident) ಕಾರಿನಲ್ಲಿದ್ದ ಐವರು ಸ್ಥಳದಲ್ಲೇ (Five passengers death)ಮೃತಪಟ್ಟಿರುವ ಘಟನೆ ಉತ್ತರಕನ್ನಡ(uttarkannada)ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ.

ಕೆಎಸ್ಆರ್‌ಟಿಸಿ ಬಸ್ ಶಿರಸಿ(KSRTC bus car accident) ಕಡೆಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಬಂಡಲ್ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿ ಸಂಬಂವಿಸಿದೆ ಅಪಘಾತದ ಭೀಕರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಮೃತಪಟ್ಟಿರುವವರು ತಮಿಳುನಾಡು ಮೂಲದವರು ಎಂಬುದು ಗೋತ್ತಾಗಿದೆ.

ಇನ್ನೂ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟಗಾಯವಾಗಿದ್ದು,ಗಾಯಗೊಂಡವರನ್ನ ಶಿರಸಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬೇಟಿ ನೀಡಿದ್ದಾರೆ.