ಸುದ್ದಿಬಿಂದು ಬ್ಯೂರೋ
ವಿಜಯಪುರ : ಗರ್ಭಿಣಿ ಓರ್ವಳನ್ನ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಅಂಬ್ಯುಲೆನ್ಸ್ ಅಪಘಾತವಾಗಿ ಗರ್ಭಿಣಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಸಮೀಪ ನಡೆದಿದೆ.

ಭಾಗ್ಯಶ್ರೀ ಪರಣ್ಣನವರ್ ಎಂಬಾಕೆಯೆ ಮೃತಪಟ್ಟಿರುವ ಮಹಿಳೆಯಾಗಿದ್ದಾರೆ.ಇವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆಕೆಯನ್ನ ಮನೆಯಿಂದ ಅಂಬ್ಯುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ತಾಳಿಕೋಟೆಯಿಂದ ವಿಜಯಪುರಕ್ಕೆ ಹೋಗುವಾಗ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಮಧ್ಯೆ ರಸ್ತೆಯಲ್ಲಿ ಅಪಘಾತವಾಗಿದೆ.

ಅಪಘಾತ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.