ಸುದ್ದಿಬಿಂದು ಬ್ಯೂರೋ
ಕಾರವಾರ ; ಮಾರಕ ಕ್ಯಾನ್ಸರ್ ರೋಗ(Cancer) ಉತ್ತರಕನ್ನಡ (uttara kanndad) ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ.ಒಂದೇ ವರ್ಷದಲ್ಲಿ ಜಿಲ್ಲಾ ಆಸ್ಪತ್ರೆ ಒಂದರಲ್ಲೇ 200ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.ದಿನದಿಂದ ದಿನಕ್ಕೆ ಕ್ಯಾನ್ಸರ್ ಖಾಯಿಲೆ ಏರಿಕೆ ಆಗತ್ತಾ ಇದ್ದು, ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.

ಜಿಲ್ಲೆಯ ಕಾರವಾರ ಸೇರಿದಂತೆ ಬಹುತೇಕ ತಾಲೂಕಿನ ಜನರು ಕ್ಯಾನ್ಸರ್ ಖಾಯಿಲೆಗೆ ಒಳಗಾಗುತ್ತಿದ್ದಾರೆ. ಜನವರಿಯಿಂದ ಈವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆ (Karwar District Hospital,) ಒಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು ಪ್ರತಿ ತಿಂಗಳು ಕ್ಯಾನ್ಸ‌ರ್ ತುತ್ತಾಗುವವರ ಸಂಖ್ಯೆ ಏರುತ್ತಲೇ ಇದೆ.ಕ್ಯಾನ್ಸರ್ ಮಾರಕ ಖಾಯಿಲೇ ಎಂದೇ ಹೇಳಲಾಗುತ್ತದೆ.‌ ಒಮ್ಮೆ ಕ್ಯಾನ್ಸರ್ ಗೆ ತುತ್ತಾದರೆ ಯಾವುದೇ ರೋಗಿ ಸ್ವಲ್ಪ ನಿರ್ಲಕ್ಷ ತೋರಿದರು ಸಾವು ಸಂಭವಿಸುವುದೇ ಹೆಚ್ಚು. ಇಂತಹ ಮಾರಕ ಖಾಯಿಲೆ ಸದ್ಯ ಜಿಲ್ಲೆಯಲ್ಲಿ ಪ್ರತಿ ತಿಂಗಳು ಏರುತ್ತಲೇ ಇದೆ. ಇದಕ್ಕೆ ಕಾರಣ ಏನು ಅನ್ನುವುದು ಮಾತ್ರ ಕುತೂಹಲವಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆಂದು ಬಂದು ಪರೀಕ್ಷೆಗೊಳಪಟ್ಟು ಕ್ಯಾನ್ಸರ್ ಎಂದು ಧೃಡಪಟ್ಟವರ ಸಂಖ್ಯೆಯಿಂದ ಜನವರಿಯಿಂದ ಕಳೆದ ಈ ವರೆಗೆ 225ಕ್ಕೂ ಅಧಿಕ ಪ್ರಕರಣಗಳಾಗಿದೆ.ಕಳೆದ ಜನವರಿಯಲ್ಲಿ 24 ಪ್ರಕರಣ ಪತ್ತೆಯಾದರೆ, ಪೆಬ್ರರಿಯಲ್ಲಿ 48,ಮಾರ್ಚ್ ನಲ್ಲಿ 17, ಏಪ್ರಿಲ್ ನಲ್ಲಿ 17,ಮೇ ನಲ್ಲಿ 25, ಜೂನ್ ನಲ್ಲಿ25, ಜುಲೈ ನಲ್ಲಿ 18, ಆಗಸ್ಟ್ ನಲ್ಲಿ 20, ಸೆಪ್ಟೆಂಬರ್ ನಲ್ಲಿ 25, ಅಕ್ಟೋಬರ್ ನಲ್ಲಿ 11ಹಾಗೂ ನವೆಂಬರ್ ನಲ್ಲಿ 17 ಪ್ರಕರಣ ಪತ್ತೆಯಾಗಿದೆ.
ಹೆಚ್ಚಾಗಿ ಬ್ರೆಸ್ಟ್ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದೆ. ಕಳೆದ ಜನವರಿಯಿಂದ ‎‫مಸುಮಾರು 55 ಪ್ರಕರಣ ಬ್ರೆಸ್ಟ್ ಕ್ಯಾನ್ಸರ್ ಧೃಡಪಟ್ಟಿದೆ. ಇದರೊಟ್ಟಿಗೆ ತಂಬಾಕು ಸೇವನೆ, ಇನ್ನಿತರ ಕಾರಣದಿಂದ ಕೆಲವರಿಗೆ ಕ್ಯಾನ್ಸರ್ ಬಂದಿರುವುದು ಪತ್ತೆಯಾಗಿದೆ. ‎‫ಜಿಲ್ಲೆಯಲ್ಲಿ ಕ್ಯಾನ್ಸ‌ರ್ ಸಂಖ್ಯೆ ಕಳೆದ ನಾಲೈದು ವರ್ಷದಲ್ಲಿ ನೋಡಿದರೆ ಪ್ರತಿ ವರ್ಷ ಏರುತ್ತಲೇ ಇದೆ.

ಇದಕ್ಕೆ ಕಾರಣ ಏನೆಂಬುದು ಮಾತ್ರ ನಿಗೂಢವಾಗಿದೆ. ಇನ್ನು ಯಲ್ಲಾಪುರ, ಶಿರಸಿ,ಸಿದ್ದಾಪುರ, ಅಂಕೋಲಾದ ಕುಮಟಾ ಭಾಗದಲ್ಲಿ ಹಾಗೂ ಕಾರವಾರ ತಾಲೂಕಿನ ಕದ್ರಾ ಸುತ್ತಮುತ್ತಲಿನ ಭಾಗದಲ್ಲಿ ಕ್ಯಾನ್ಸರ್ ಸಂಖ್ಯೆ ಪತ್ತೆ ಯಾಗಿದ್ದು ಕಾರಣ ಏನೆಂಬುವ ಹುಡುಕಾಟದಲ್ಲಿದ್ದಾರೆ.ಸದ್ಯ ಕ್ಯಾನ್ಸರ್ ಪತ್ತೆಯಾದವರು ಬೇರೆ ಜಿಲ್ಲೆಗಳಲ್ಲಿನ ಚಿಕಿತ್ಸೆ ಆಸ್ಪತ್ರೆಯಲ್ಲಿಯೇ ಪಡೆಯುವ ಅನಿವಾರ್ಯತೆ ಎದುರಾಗಿದ್ದು ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚುತ್ತಿರುವುದನ್ನ ಗಂಭೀರವಾಗಿ ತೆಗೆದುಕೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರ ನೇಮಕ ಹಾಗೂ ಚಿಕಿತ್ಸೆಗೆ ವ್ಯವಸ್ಥೆಯನ್ನ ಮಾಡಬೇಕಿದೆ.

ಜಿಲ್ಲೆಯಲ್ಲಿ ಸದ್ದಿಲ್ಲದೇ ಕ್ಯಾನ್ಸರ್ ಖಾಯಿಲೆ ಏರಿಕೆ ಆಗುತ್ತಿದ್ದು,ಪರಿಸ್ಥಿತಿ ಇದೇ ರೀತಿ ಮುಂದುವರೆದಲ್ಲಿ ಇನ್ನಷ್ಟು ಜನ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ, ಈ ಬಗ್ಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.