ಸುದ್ದಿಬಿಂದು ಬ್ಯೂರೋ
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್‌ ಪಲ್ಟಿಯಾಗಿರುವ ಘಟನೆ ಉತ್ತರಕನ್ನಡ (uttarkannada)ಜಿಲ್ಲೆಯ ಗುಣವಂತೆ ಸಮೀಪ‌ ನಡೆದಿದೆ.

ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದ ಎಚ್ ಬಿ ಗ್ಯಾಸ್ ಟ್ಯಾಂಕರ್ (Gas) ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ.‌ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಳಿಗೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ‌ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಗ್ಯಾಸ್ ಟ್ಯಾಂಕರ್ ಹೆದ್ದಾರಿಯಲ್ಲಿ ಪಲ್ಟಿಯಾಗಿರುವುದರಿಂದ‌ ಕೆಲ ಸಮಯ ಉಳಿದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.ಸದ್ಯ ಪಲ್ಟಿಯಾಗಿರುವ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗದೆ ಇರುವುದನ್ನ ದೃಢಪಡಿಸಿಕೊಂಡಿರುವ ಪೊಲೀಸರು ಉಳಿದ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದಾರೆ.