ಸುದ್ದಿಬಿಂದು ಬ್ಯೂರೋ
Kumta : ಕುಮಟಾ : ಮನೆಯಲ್ಲಿದ್ದ ಅಡುಗೆ ಸಿಲೆಂಡರ್ ಸ್ಪೋಟಗೊಂಡು ಮನೆಗೆ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೆಗಡೆ ಗ್ರಾಮದಲ್ಲಿ ನಡೆದಿದೆ.

ಹೆಗಡೆಯ ನಾರಾಯಣ ಮುಕ್ರಿ ಅವರ‌ ಮನೆಯಲ್ಲಿ ಈ ಅಗ್ನಿ ಅವಘಡ ಸಂಬಂಧಿಸಿದೆ. ಸಿಲೆಂಡರ್ ಸೋರಿಕೆಯಿಂದಾಗಿ ಮನೆಯಲ್ಲಿದ್ದ ಎರಡು ಸಿಲೆಂಡರ್ ಸ್ಪೋಟಗೊಂಡಿದೆ ಎನ್ನಲಾಗಿದೆ. ಇದು ಹಂಚಿನ ಮನೆಯಾಗಿದ್ದು ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೆ ಒಳಗಾಗಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವುದರಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಮನೆಯಲ್ಲಿದ್ದ‌ ಬಟ್ಟೆ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟುಕರಲಾಗಿದ್ದು, ಈ ಘಟನೆಯಿಂದಾಗಿ ನಾರಾಯಣ ಮುಕ್ರಿ ಅವರ ಕುಟುಂಬ ಸಂಕಷ್ಟ ಎದುರಿಸುವಂತಾಗಿದೆ.

ಬೆಂಕಿ ತಗುಲಿರುವುದನ್ನ ನೋಡಿದ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರು ಸಾಧ್ಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದಾರೆ.