ಸುದ್ದಿಬಿಂದು ಬ್ಯೂರೋ
ಮುಂಡಗೋಡ : ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಪುಟ್ಟ ಕಂದಮ್ಮ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂರು ವರ್ಷದ ಮಾನ್ವಿತಾ ಮಲ್ಲಿಕಾರ್ಜುನ ಹೊಸೂರ ದುರಂತ ಸಾವು ಕಂಡಿರುವ ಕಂದಮ್ಮ, ಈಕೆ ತನ್ನ ತಾಯಿ ಜೊತೆಯಲ್ಲಿ ಇಟ್ಟಿಗೆ ಭಟ್ಟಿಗೆ ಹೋಗಿದ್ದಳು, ತಾಯಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಮಗು ಆಟವಾಡುವಾಗ ನೀರಿನ ತೊಟ್ಟಿಗೆ ಬಿದ್ದಿದ್ದಾಳೆ.ತಕ್ಷಣ ಆಕೆಯನ್ನ ಮುಂಡಗೋಡ ಆಸ್ಪತ್ರೆ ದಾಖಲಿಸಿ ಬಳಿಕ ಹುಬ್ಬಳಿ ಆಸ್ಪತ್ರೆಗೆ ಸಾಗಿಸಿರುವ ಸಮಯದಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.
ಮುಂಡಗೋಡ ತಾಲೂಕಿನಲ್ಲಿ ಅತೀ ಹೆಚ್ಚು ಅನಧಿಕೃತ ಇಟ್ಟಿಗೆ ಭಟ್ಟಿಗಳು ಇದೆ ಎಂದು ಈ ಹಿಂದಿನಿಂದಲ್ಲೂ ಸ್ಥಳೀಯರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡುತ್ತಲೇ ಬಂದಿದ್ದಾರೆ. ಆದರೆ ಅಧಿಕಾರಿಗಳ ಗಮನಕ್ಕೆ ಇದ್ದರು ಇದುವರೆಗೆ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ.
ಇನ್ನೂ ಮಗು ಮೃತಪಟ್ಟಿರುವ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.