ಹುಬ್ಬಳ್ಳಿ : ಬಿ ಕೆ ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡತಾ ಇದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಗೋಡೋ ಅನುಯಾಯಿಗಳು ಎಂಬ ಹೇಳಿಕೆಗೆ ಪ್ರತಿಕ್ರಿಯೇ ನೀಡಿದ ಅವರು, ಅವರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು ಅಂತಾ ಗೊತ್ತು. ಬಿಜೆಪಿಯವರು ಬ್ರಿಟಿಷ್ ಬೂಟ್ ನೆಕ್ಕುವವರು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ.ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು.

ಅವರು ಮಾತು ಅವರಿಗೆ ಗೌರವ ತರಲ್ಲ. ಅವರು ದೊಡ್ಡವರು ಆಗಲ್ಲ. ಅವರ ವ್ಯಕ್ತಿತ್ವ ಬೆಳೆಯಲ್ಲ.ಚೆಪ್ಪಲ್ಲ ಬೂಟು ನೆಕ್ಕುವುದು ಎಂಬ ಹೇಳಿಕೆ ಸರಿಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು.ಕಳ್ಳನ ಕೈಯಲ್ಲಿ ಬಿಜೆಪಿ ನಾಯಕರು ಆಡಳಿತ ಕೊಟ್ಟಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ ಒಬ್ಬ ಹಿರಿಯರು. ಪಕ್ಷದ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಗೌರವ ಕೊಡಬೇಕು.

ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಸೋಮಣ್ಣ ಕಾಂಗ್ರೆಸ್ ಸೇರಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಪಂಚ ರಾಜ್ಯ ಚುನಾವಣೆ ಬಳಿಕೆ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ.
ಇನ್ನು ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿಯೇ ಸರಿಯಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಅಂತಾ ಚರ್ಚೆ ಆದಾಗಇನ್ನಷ್ಟು ಬಿರುಕು ಇಂಡಿಯಾ ಒಕ್ಕೂಟದಲ್ಲಿ ಬಿಟ್ಟಿದೆ. ಲೋಕಸಭಾ ಚುನಾವಣೆ ಬರುವುದರೊಳಗಾಗಿ ಇಂಡಿಯಾ ಛಿದ್ರವಾಗಿ ಹೋಗುತ್ತದೆ ಎಂದರು.