ಸುದ್ದಿಬಿಂದು ಬ್ಯೂರೋ
ಕಾರವಾರ: ಬೆಂಗಳೂರಿಗೆ ತೆರಳುತ್ತಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾರು ಅಪಘಾತವಾಗಿದ್ದು,(Minister Madhu Bangarappa car accident)ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತೂಮಕೂರು ಜಿಲ್ಲೆಯ ಕ್ಯಾತ್ಸಂದ್ರ ಬಳಿ ನಡೆದಿದೆ.

ಮಧು ಬಂಗಾರಪ್ಪ ಅವರು ನಿನ್ನೆ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಅವರು ಚಲಿಸುತ್ತಿದ್ದ ಕಾರಿಗೆ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರನಲ್ಲಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ(Education Minister Madhu Bangarappa) ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಾಗಿದ್ದಾರೆ.

ಅಪಘಾತದ ಬಳಿಕ ಸಚಿವ ಮಧು ಬಂಗಾರಪ್ಪ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.