ಸುದ್ದಿಬಿಂದು ಬ್ಯೂರೋ
ಚಿಕ್ಕಬಳ್ಳಾಪುರ : ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯಿಂದ ಚುಂಬನ ತೆಗೆದುಕೊಂಡಿರುವ ಫೋಟೊ, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಕಿಯಿಂದ ಇದೇಂಥಾ ಪಾಠ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಶಾಲೆಯಿಂದ ಮಕ್ಕಳನ್ನು ಪ್ರವಾಸಕ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬಾಕೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿದ್ದಾರೆ.ವಿದ್ಯಾರ್ಥಿ ಕೆನ್ನೆಗೆ ಮುತ್ತು ಕೊಡುವುದು ಹಾಗೂ ಶಿಕ್ಷಕಿಯ ಸೀರೆ ಸೆರಗು ಎಳೆಯುವುದು, ಶಿಕ್ಷಕಿಯನ್ನು ಮೇಲಕ್ಕೆ ಎತ್ತುವುದು ಹೀಗೆ ವಿವಿಧ ಭಂಗಿಗಳಲ್ಲಿ ತೆಗೆಸಿಕೊಂಡ ಫೋಟೊ ವೈರಲ್ ಆಗಿದೆ.

ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಶಿಕ್ಷಕಿ ಸಾವು

ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು ಈ ಎಲ್ಲ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್‌ ಆಗಿದೆ.ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಎಸ್‌ಡಿಎಂಸಿ ಸದಸ್ಯರು ಒತ್ತಾಯಿಸಿದ್ದಾರೆ. ಜತೆಗೆ ಶಿಕ್ಷಕಿಯ ಈ ನಡೆಗೆ ಪೋಷಕರು ಕಿಡಿಕಾರಿದ್ದು, ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತೆರಳಿ ಶಿಕ್ಷಕಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.