ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಬಿಜೆಪಿಯ ರೆಬಲ್ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಇಬ್ಬರೂ ಶಾಸಕರು ಸಂಕ್ರಾಂತಿ ‌ಬಳಿಕ ಕಾಂಗ್ರೆಸ್ ‌ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಗೆ ಬರುವ ಶಾಸಕರಿಗೆ ಡಿ ಕೆ ಶಿವಕುಮಾರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರಿಗೆ ಡಿ ಕೆ ಶಿವಕುಮಾರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಆಪ್ ನೀಡಿದ್ದಾರೆ ಎನ್ನಲಾಗುತ್ತಿದೆ., ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಶಿವರಾಮ ಹೆಬ್ಬಾರ್, ಬೆಂಗಳೂರು ಉತ್ತರದಿಂದ ಎಸ್ ಟಿ ಸೋಮಶೇಖರ್ ಅವರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.ಹೀಗಾಗಿ ಈ ಇಬ್ಬರೂ ಶಾಸಕರು ಶೀಘ್ರದಲ್ಲಿ ಬಿಜೆಪಿಗೆ ಗುಡ್ ಬೈ ಹೇಳುವ ಸಾಧ್ಯತೆ ಹೆಚ್ಚಾಗಿದೆ.

ಈ ಇಬ್ಬರೂ ಶಾಸಕರು ಈಗಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದಕ್ಕೆ ಪುಷ್ಟಿ ನೀಡುವಂತೆ ಈ ಇಬ್ಬರೂ ಶಾಸಕರು ಹಲವು ಬಾರಿ ಕಾಂಗ್ರೆಸ್ ನಾಯ್ಕರನ್ನ ವೈಯಕ್ತಿಕವಾಗಿ ಭೇಟಿಯಾಗುತ್ತಲೆ ಇದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಡಿ ಕೆ ಶಿವಕುಮಾರ ಹೈಕಮಾಂಡ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಲೋಕಸಭಾ ಚುನಾವಣಾ ವಿಚಾರವಾಗಿ ಚರ್ಚೆ ಮಾಡಲು ಡಿ ಕೆ ಶಿವಕುಮಾರ ಹಾಗೂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಮಾಡಲಿದ್ದು, ಈ ವೇಳೆ ಈ ಇಬ್ಬರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಹೈಕಮಾಂಡ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.ಈಗಾಗಲೇ ಈ ಇಬ್ಬರಿಗೂ ಪಕ್ಷ ಸೇರ್ಪಡೆ ಗೆ ಸಹ ಸೂಚನೆ ನೀಡಿದ್ದಾರೆ ಎನ್ನಲಾಗಿದೆ‌. ಜನವರಿ ನಾಲ್ಕರಂದು ದೆಹಲಿಯಲ್ಲಿ ನಡೆಯುವ ಸಭೆಯ ಬಳಿಕ ಈ ಇಬ್ಬರೂ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನಗೊಳ್ಳುವ ಸಾಧ್ಯತೆ ಇದೆ..