ಸುದ್ದಿಬಿಂದು ಬ್ಯೂರೋ
ಕಾರವಾರ: ರಾಮನ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ಧರ್ಮವನ್ನ ಎಲ್ಲರೂ ಹಿಂದಿನಿಂದ ಆಚರಣೆ ಮಾಡುತ್ತಿದ್ದಾರೆ. ಪಾರ್ಲಿಮೆಂಟ್ ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿಗರು ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಅವರು ಇಂದು ಕಾರವಾರದಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಹೇಳಿ ನೀಡಿದ್ದಾರೆ. ಈ ಭಾರಿ ಜನರೆ ಇವರಿಗೆ ತಕ್ಕ ಉತ್ತರ ಕೊಡಲಿದ್ದಾರೆ.ಬಿ.ಕೆ ಹರಿಪ್ರಸಾದ್ ಅವರು ಹಿಂದಿನ ಹಿನ್ನಲೆ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣೆ ಸಂಧರ್ಭದಲ್ಲಿ ಇತರೇ ಸಂಧರ್ಭದಲ್ಲಿ ಹಲವು ಘಟನೆಗಳನ್ನ ಆಗಿರುವುದನ್ನ ನೋಡಿದ್ದೇವೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಇಂತಹ ಘಟನೆ ಆಗಬಾರದು ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಪರೇಶ ಮೇಸ್ತಾ ಪ್ರಕರಣದಲ್ಲಿ ಬೆಂಕಿ ಹಚ್ಚಿದ್ದನ್ನ ನೋಡಿದ್ದೇವೆ ಎಂದ ಶಾಸಕ ಭೀಮಣ್ಣ ನಾಯ್ಕ ಹೇಳಿಕೆ ನೀಡಿದ್ದಾರೆ.