ಸುದ್ದಿಬಿಂದು ಬ್ಯೂರೋ
ಹುಬ್ಬಳ್ಳಿ : ಸಿ ಎಂ ಸಿದ್ದರಾಮಯ್ಯ ಅವರ ಬಗ್ಗೆ ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅನಂತ್ ಕುಮಾರ್ ಹೆಗಡೆ ಹದ್ದು ಮೀರಿ ವರ್ತಿಸುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಅನಂತಕುಮಾರ ಹೆಗಡೆ ಲಕ್ಷ್ಮಣ ರೇಖೆ ದಾಟಿ ಮಾತನಾಡುತ್ತಿದ್ದಾರೆ, ಇಷ್ಟು ದಿನ ನಾಪತ್ತೆಯಾದವರು ಈಗ ಪ್ರತ್ಯಕ್ಷರಾಗಿದ್ದಾರೆ, ಲೋಕಸಭಾ ಚುನಾವಣೆ ದೃಷ್ಟಿಯಿಂದ ತುಂಬಾ ಆಕ್ಟಿವ್ ಆಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೋದಿ ತಮ್ಮ ಜಿಲ್ಲೆಗೆ ಬಂದಾಗ ಇವರು ಎಲ್ಲಿ ಹೋಗಿದ್ದರು..? ಈಗ ಬಂದು ಬಾಯಿಗೆ ಬಂದಂತೆ ಮಾತಾಡ್ತಿದ್ದಾರೆ, ಸಂವಿಧಾನಿಕ ಹುದ್ದೆಯಲ್ಲಿದ್ದವರ ಮೇಲೆ ಈ ರೀತಿ ಮಾತಾಡೋದು ಸರಿಯಲ್ಲ, ಪ್ರಧಾನಿ ಮೋದಿ ಬಗ್ಗೆ ಈ ರೀತಿ ಮಾತನಾಡಿದರೆ ಸುಮ್ಮನೆ ಇರುತ್ತಾರಾ..? ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ.
ಭಟ್ಕಳ ಹಾಗೂ ಶಿರಸಿಯಲ್ಲಿ ಇರುವ ಪಳ್ಳಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇಷ್ಟು ವರ್ಷ ಇದೆ ಅನಂತಕುಮಾರ ಹೆಗಡೆಯೇ ಸಂಸದರದಾಗಿದ್ದಾಗ ಇದ್ಯಾವುದು ಅವರ ಕಣ್ಣಿಗೆ ಕಂಡಿಲ್ಲವಾ..? ಪ್ರತಿ ಚುನಾವಣೆಯಲ್ಲಿಯೂ ಇವರು ಹಿಂದೂತ್ವದ ಆಧಾರದಲ್ಲಿ ಗೆದ್ದು ಬರುತ್ತಿದ್ದಾರೆಂದು ಅನಂತಕುಮಾರ ವಿರುದ್ಧ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ