ಸುದ್ದಿಬಿಂದು ಬ್ಯೂರೋ
ಕುಮಟಾ : ಉತ್ತರಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುವೋಟೊ ಪ್ರಕರಣ ದಾಖಲಾಗಿದೆ.

ಸಂಸದ ಅನಂತಕುಮಾರ ಹೆಗಡೆ ನಿನ್ನೆ ಕುಮಟಾದಲ್ಲಿ ಕಾರ್ಯಕರ್ತರ ಸಭೆಯೊಂದರಲ್ಲಿ ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ರೀತಿಯಲ್ಲಿ ಭಾಷಣ ಮಾಡಿದ್ದರು. ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಪ್ರಕರಣ ದಾಖಲಾಗಿದೆ.ಈ ವಿಚಾರವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೂಡಾ ಪ್ರಕರಣ ದಾಖಲಿಸಲು ಸಾಕಷ್ಟು ಒತ್ತಡ ಹಾಕಿದ್ದರ. ಹೀಗಾಗಿ ಅವರ ವಿರುದ್ದ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಸಂಸದರು ತಮ್ಮ ಭಾಷಣದಲ್ಲಿ ಹೇಳಿದ್ದರು.ಅಷ್ಟೆ ಅಲ್ಲದೆ ಸಿಎಂ ಸಿದ್ಧಾರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗಿಸಿದ್ದರು, ಇನ್ನೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಎಂದು ಹೇಳುವ ಮೂಲಕ ವಿವಾದಾತ್ಮಕವಾಗಿರುವ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಅವರ ವಿರುದ್ದ ಪ್ರಕರಣ ದಾಖಲಾಗಿದೆ.