ಸುದ್ದಿಬಿಂದು ಬ್ಯೂರೋ
ಶಿವಮೊಗ್ಗ: ಕಳೆದ 8 ತಿಂಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಶಮಿತಾ (24) ಆತ್ಮಹತ್ಯೆ ಮಾಡಿಕೊಂಡಿರುವ ನವ ವಿವಾಹಿತೆಯಾಗಿದ್ದಾಳೆ. ರಾತ್ರಿ ಮಲಗಲು ಮನೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನೊಣಬೂರು ಗ್ರಾಪಂ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜತೆ ವಿವಾಹವಾಗಿದ್ದರು. ಇವರಿಬ್ಬರೂ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು,
ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಮಾವ ಹಾಗೂ ಅತ್ತೆ ಇದ್ದರು. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಬರೆಯಲಾಗಿದೆ. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಗಿದೆ.