ಸುದ್ದಿಬಿಂದು ಬ್ಯೂರೋ
ತುಮಕೂರು : ನಾಳೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಜೆ ನೀಡುವಂತೆ ಸರಕಾರದ ಮೇಲೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಆದರೆ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ.ಪ್ರತಿಯೊಂದು ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ.

ಬೇರೆ ಬೇರೆ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ನಾಳೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.