ಸುದ್ದಿಬಿಂದು ಬ್ಯೂರೋ
ನವದೆಹಲಿ : ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಇದೀಗ ಲೋಕಸಭಾ ಚುನಾವಣಾ ಸಮಯದಲ್ಲಿ ವಾಪಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ..

ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆಗೆ ನಡೆದ ಮಾತುಕತೆ ಯಶಸ್ವಿಯಾದ ಬಳಿಕ ಜಗದೀಶ್ ಶೆಟ್ಟರ್ ಬಿಜೆಪಿಗೆ ಮತ್ತೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಾಂಗ್ರೆಸ್ ನಲ್ಲಿದ್ದರೂ, ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇದೆ ಎನ್ನುವ ಆರೋಪಗಳು ಇತ್ತೀಚೆಗೆ ಸಾಕಷ್ಟು ಬಾರಿ ಕೇಳಿ ಬಂದಿತ್ತು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಸೋಲನುಭವಿಸಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡಲಾಗಿತ್ತು. ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದಾರೆ.
.