ಸುದ್ದಿಬಿಂದು ಬ್ಯೂರೋ
ವಿಜಯಪುರ : ಬಿಜೆಪಿ ಸಂಸದರಾಗಿರುವ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದ ರಮೇಶ್ ಜಿಗಜಿಣಗಿ ಅವರು ಇಂದು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ದಿಢೀ‌ರ್ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..ಸದ್ಯ ಅವರ ಆರೋಗ್ಯದಲ್ಲಿ ಯಾವುದೆ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಅವರ ಆಪ್ತ ವಲಯದಿಂದ ತಿಳಿದು ಬಂದಿದೆ.