ಸುದ್ದಿಬಿಂದು ಬ್ಯೂರೋ.
ಕುಮಟಾ: ಗೋಕರ್ಣದ ಮೊಡಂಗಿಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಮೋಹನ್ ಮಾಣೇಶ್ವರ ಮೊಡಂಗಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು,ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿದೆ. ಇದರಿಂದಾಗಿ ಮನೆಯಲ್ಲಿದ್ದ ಬಟ್ಟೆ ಹಾಗೂ ಟಿವಿ ಸೇರಿದಂತೆ ಎಲ್ಲಾ ವಿದ್ಯುತ್ ಉಪಕರಣಗಳು ಬೆಂಕಿಯಿಂದಾಗಿ ಭಸ್ಮವಾಗಿದೆ. ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೆ ಇರುವ ಕಾರಣ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಗಳು, ಸ್ಥಳೀಯ ಗ್ರಾಮ ಪಂಚಾಯತ ಅಧ್ಯಕ್ಷರು,ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.