ಸುದ್ದಿಬಿಂದು ಬ್ಯೂರೋ
ಕುಮಟಾ :- ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್‌ದ (Japan) ಪ್ರವಾಸಿ ಮಹಿಳೆ (tourist women) ಕೇರಳದಲ್ಲಿ ಪತ್ತೆಯಾಗಿದ್ದು ಗೋಕರ್ಣ ಪೊಲೀಸರ ತಂಡ ಆಕೆಯನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆಕೆಯನ್ನ ಪತಿಗೆ ಒಪ್ಪಿಸಿದ್ದಾರೆ.

ಒಂದುವಾರದ ಹಿಂದೆ ಗೋಕರ್ಣ ನೇಚರ್ ಕಾಟೇಜ್ ನಲ್ಲಿ ವಾಸವಾಗಿದ್ದ ಮಹಿಳೆ ಹೊರಗೆ ಹೋಗಿ ಬರುವುದಾಗಿ ಪತಿ ಬಳಿ ಹೇಳಿ ನಾಪತ್ತೆಯಾಗಿದ್ದಳು. ಆಕೆ ನಾಪತ್ತೆಯಾಗಿರುವ ಬಗ್ಗೆ ಪತಿ ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರಿ. ಇದೀಗ ಮಹಿಳೆ ಪತ್ತೆಯಾಗಿದ್ದಾಳೆ.

ಪತಿಯ ಜತೆ ತಂಗಿದ್ದ ಮಹಿಳೆ ಯಾವುದೋ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದಳು. ನಂತರ ಪತಿಯ ಮೇಲಿನ ಸಿಟ್ಟಿನಿಂದ ಮುಂಜಾನೆ ಎದ್ದು ಹೋದ ಮಹಿಳೆ ಗೋಕರ್ಣದ ರೈಲ್ವೆ ನಿಲ್ದಾಣಕ್ಕೆ ತೆರಳಿ ಹಿಂದೆ ಭೇಟಿ ನೀಡಿದ್ದ ಕೇರಳಕ್ಕೆ ತೆರಳಿದ್ದಾಳೆ. ಈ ವೇಳೆ ಆನ್ ಲೈನ್ ನಲ್ಲಿ ಸಕ್ರಿಯವಾಗಿದ್ದರಿಂದ ಪತ್ತೆ ಹಚ್ಚುವಲ್ಲಿ ಪೊಲೀಸರಿಗೂ ಸಹಾಯವಾಗಿದ್ದು ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.