ಸುದ್ದಿಬಿಂದು ಬ್ಯೂರೋ
ಶಿರಸಿ : ಗ್ರಾಮ ಪಂಚಾಯತ್ ಸಿಬ್ಬಂದಿ ಓರ್ವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಗದ್ದೆಯಲ್ಲಿ ನಡೆದಿದೆ.

ಮಹೇಂದ್ರ ನಾಯ್ಕ (29) ಎಂಬಾತನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ದೊಡ್ನಳ್ಳಿ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದಾನೆ. ಯಾವುದೋ ಒಂದು ಕಾರಣಕ್ಕೆ ಮನಸ್ಸಿಗೆ ಹಚ್ಚಿಕೊಂಡ ಈತ ತನ್ನ ಮನೆಯ ಹಿಂಬದಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಆತನ ಆತ್ಮಹತ್ಯೆಗೆ ಇದುವರಗೆ ನಿಖರವಾಗಿರುವ ಕಾರಣ ತಿಳಿದುಬಂದಿಲ್ಲ