ಸುದ್ದಿಬಿಂದು ಬ್ಯೂರೋ
ಕುಮಟಾ : ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ತಗುಲಿ ಮನೆಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತಂಡ್ರಕುಳಿಯಲ್ಲಿ ನಡೆದಿದೆ.

ತಂಡ್ರಕುಳಿಯ ರಾಘವೇಂದ್ರ ಗೋಪಾಲ ಅಂಬಿಗ, ರಮೇಶ ಗೋಪಾಲ ಅಂಬಿಗ,ರಾಮಕೃಷ್ಣ ಗೋಪಾಲ ಅಂಬಿಗ ಒಂದೆ ಸಹೋದರರು ಒಂದೆ ಮನೆಯಲ್ಲಿ ವಾಸವಾಗಿದ್ದರು.ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿಯ ಕಿಡಿ ಮನೆಯ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಹೊತ್ತಿಕೊಂಡಿದ್ದು ಅದರ ಕಿಡಿ ಮನೆಯ ಮೇಲೆ ಬಿದಿದ್ದೆ. ಇದರಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗಡೆ ಓಡಿ ಹೋಗಿದ್ದು, ಇದರಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.
ಘಟನಾ ಸ್ಥಳಕ್ಕೆ ಇದೀಗ ಕುಮಟಾ ಹಾಗೂ ಅಂಕೋಲಾದಿಂದ ಅಗ್ನಿ ಶಾಮಕ ದಳ ಆಗಮಿಸಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ‌.