ಸುದ್ದಿಬಿಂದು ಬ್ಯೂರೋ
ಕಾರವಾರ : ಇನ್ನ ಮುಂದೆ ಉತ್ತರಕನ್ನಡ ಜಿಲ್ಲೆಯಲ್ಲಿ ಬಸ್ ನಲ್ಲಿ ಪ್ರಯಾಣಿಸುವವರು ಫರ್ಸ್ ನಲ್ಲಿ ಹಣ ಇಲ್ಲದೆ ಹೋದರೂ ಪೋನ್ ಫೇ ಮೂಲಕ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಕಂಡಕ್ಟರ್‌ಗಳು ಚಿಲ್ಲರೆ ಕೊಡದಿದ್ದಾಗ ಅನೇಕ ಬಾರಿ ಜಗಳ ಮಾಡಿದ ಉದಾಹರಣೆಗಳೂ ಇವೆ. ಆದರೆ, ಈಗ ಸಾರಿಗೆ ಇಲಾಖೆಯಿಂದ ಬಸ್‌ಗಳಲ್ಲಿ ಯುಪಿಐ ಸ್ಕ್ಯಾನ್‌ ಕೋಡ್‌ ಮೂಲಕ ಟಿಕೆಟ್‌ ಖರೀದಿಗೆ ವ್ಯವಸ್ಥೆ ಮಾಡಲಾಗಿದೆ. ಇದುವರಗೆ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಇದು ಆರಂಭವಾಗಿದ್ದರು ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಅಷ್ಟಾಗಿ ಕಾರ್ಯರೂಪಕ್ಕೆ ಬಂದಿರಲಿಲ್ಲ‌.

ಆದರೆ ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಬಸ್ ಕಂಡಕ್ಟರ್ ಕೊರಳಲ್ಲಿ ಇನ್ನ ಮೇಲೆ ಪೋನ್ ಫೇ UPI ಕೋಡ್ ಸ್ಕ್ಯಾನ್ ಕಾರ್ಡ್ ಇರಲಿದೆ. ಹೀಗಾಗಿ, ಇನ್ನುಮುಂದೆ ಟಿಕೆಟ್‌ಗಾಗಿ ನಗದು ಹಣ, ಚಿಲ್ಲರೆ ಇಟ್ಟುಕೊಂಡು ಹೋಗುವ ಅಗತ್ಯವೇ ಇಲ್ಲ. ಆದರೆ, ನಗದು ಹಣವಿಲ್ಲದವರು ಆನ್‌ಲೈನ್‌ ಪೇಮೆಂಟ್‌ ಆಪ್‌ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯಲು ಸಾರಿಗೆ ಇಲಾಖೆ ಅನುಕೂಲ ಮಾಡಿಕೊಟ್ಟಿದೆ.

ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ UPI ಪೇಮೆಂಟ್ ಅವಕಾಶ ಇದ್ದರೆ ಸಾಕು ಬಸ್‌ನಲ್ಲಿ ಟಿಕೆಟ್ ಪಡೆಯಬಹುದು. UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ ನೀಡಲಾಗಿದೆ. ಪೋನ್ ಪೇ, ಗೂಗಲ್ ಪೇ ಸೇರಿದಂತೆ UPI ಮೂಲಕ ಪೇಮೆಂಟ್ ಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಚಿಲ್ಲರೆ ಹಣಕ್ಕಾಗಿ ನಿತ್ಯವೂ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ನಡೆಯುತ್ತಿದ್ದ ಚಿಲ್ಲರೆ ಜಗಳಕ್ಕೆ ಬ್ರೇಕ್ ಬಿಳಲಿದೆ.