suddibindu.in
Chamarajanagar:ಚಾಮರಾಜನಗರ: ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್(Reels)ಮಾಡಿದ ವಿಡಿಯೋ ಒಂದು ವೈರಲ್(Video Viral,)ಆಗಿರುವುದನ್ನ ನೋಡಿ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ (suicide to wife reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Network) ಅಪ್ ಲೋಡ್( Upload)ಮಾಡಿದ್ದಾರೆ. ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ದಾಖಲಾಗಿದೆ. ಹನೂರು ಪೊಲೀಸ್(Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.