susuddibindu.in
ಬೆಂಗಳೂರು : ಎಫ್. ಎಸ್ .ಎಲ್ ವರದಿ ಬಂದ ನಂತರ ಪಾಕಿಸ್ತಾನ ಜಿಂದಾಬಾದ್(Pakistan Zindabad,) ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು.ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ.ಎಂದು (cm)ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
- ಹೆದ್ದಾರಿ ದಾಟುತ್ತಿದ್ದ ಪ್ರೇಮಕ್ಕನಿಗೆ ಅಪಘಾತ : ಕಾಲಿಗೆ ಗಂಭೀರ ಗಾಯ
- ಅಂಕೋಲಾ ಪುರಸಭೆಯಲ್ಲಿ ಕರ್ತವ್ಯ ಲೋಪ ಅಧಿಕಾರ ದುರುಪಯೋಗಪಡಿಸಿದ ಅಧ್ಯಕ್ಷರು ಮತ್ತು ಅದಕ್ಕೆ ಸಹಕರಿಸಿದ ಸದಸ್ಯರ ಮೇಲೆ ಮಾನ್ಯ ಲೋಕಾಯುಕ್ತರಲ್ಲಿ ದೂರು: ಮಂಜುನಾಥ ನಾಯ್ಕ
- ಚಿನ್ನದ ಬೆಲೆ ಇಳಿಕೆ – ಬಂಗಾರ ಖರೀದಿದಾರರಿಗೆ ಸಂಭ್ರಮ
ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು.ಧ್ವನಿ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ನಂತರ ಅದು ಸಾಬೀತಾದರೆ ಕಠಿಣ ಕ್ರಮ ಜರುಗಿಸಲಾಗುವುದು.ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ(BJP) ಮಾತ್ರವಲ್ಲ, ಮಾಧ್ಯಮಗಳು ಸಹ ಆರೋಪಿಸಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಮತ್ತು ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದರು.ಗೆಲುವಿನ ಸಂಭ್ರಮಾಚರಣೆ ವೇಳೆ, ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ (Syed Nasir Hussain,)ಸಮೀಪವಿದ್ದ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾನೆ ಎನ್ನಲಾಗುವ ವಿಡಿಯೊ ಕೆಲ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.





