suddibindu.in
ಕಾರವಾರ :ಕಡ್ಡಾಯ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸಿಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)ಯ ರಾಜ್ಯಾಧ್ಯಕ್ಷ ನಾರಾಯಣಗೌಡ (Narayana Gowdru) ಆದೇಶದಂತೆ ಉತ್ತರಕನ್ನಡ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ನೇತೃತ್ವದಲ್ಲಿ ಇಂಗ್ಲಿಷ್ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು.

ನಗರದಲ್ಲಿನ ವಿವಿಧ ಅಂಗಡಿಗಳಿಗೆ ಎದುರು ಪ್ರತಿಭಟನೆ ಮಾಡಿದ ರಕ್ಷಣಾವೇದಿಕೆ ಕಾರ್ಯಕರ್ತರು ಕನ್ನಡೇತರ ನಾಮಫಲಕ ಬದಲಾಯಿಸುವಂತೆ ಒತ್ತಾಯಿಸಿದರು. ಒಂದು ವಾರದಲ್ಲಿ ಕನ್ನಡ ಬಳಸದಿದ್ದಲ್ಲಿ ಈಗ ಹಾಕಿರುವ ನಾಮಫಲಕವನ್ನ ಉಡೀಸ್ ಮಾಡುವ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:

ಕರ್ನಾಟಕದಲ್ಲಿ ಕನ್ನಡ ನಾಮಫಲಕಗಳು ಇರಬೇಕು ಎಂಬ ಹಕ್ಕೊತ್ತಾಯವನ್ನು ಇಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ನಿರ್ಡಾಯಕ ಚಳವಳಿ ಕೈಗೊಂಡಿದ್ದು ತಮಗೆಲ್ಲ ತಿಳಿದ ವಿಷಯ ಕಳೆದ ವರ್ಷ ಡಿಸೆಂಬರ್ 27 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇತಿಹಾಸವನ್ನೇ ಸೃಷ್ಟಿಸಿತು. ಕನ್ನಡ ನಮಗೇಕೆ ಬೇಕು ಎಂಬ ದರ್ಪದಿಂದ ಬಂತು ಕೊಜ್ಜಿದ್ದ ಪರಭಾಷಿಕ ಉದ್ಯಮಿಗಳಿಗೆ ಪಾಠ ಕಲಿಸುವ ಕೆಲಸವನ್ನು ನಾವು ಯಶಸ್ವಿಯಾಗಿ ಮಾಡಿದೆವು. ಅಂದು ಬೆಂಗಳೂರು ಮಹಾನಗರದಲ್ಲಿ ಸಾವಿರಾರು ಕನ್ನಡೇತರ ನಾಮಫಲಕಗಳು ಧರೆಗುರುಳಿದವು ನಮ್ಮ ಚಳವಳಿಗೆ ರಾಜ್ಯದ ಜನತೆ ತುಂಬು ಮನಸಿನಿಂದ ಬೆಂಬಲಿಸಿತು. ಕನ್ನಡ ನಾಮಫಲಕ ಬೇಕು ಎಂದು ದಶಕಗಳಿಂದ ಹಂಬಲಿಸುತ್ತಿದ್ದ ಮನಸುಗಳಿಗೆ ಸಮಾಧಾನ ತಂದ ಬಹುದೊಡ್ಡ ಹೋರಾಟವಿದು.

ನಮ್ಮ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆದುಕೊಂಡಿತು. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕೂಡ ಜಾರಿಯಾಗಿದೆ. ಇದು ಕಾನೂನಾಗಿ ರೂಪಗೊಳ್ಳಲು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರ ಕಾರ್ಯಕರ್ತರ ತ್ಯಾಗ. ಛಲ ಬಿಡದ ಹೋರಾಟ ಕಾರಣ ಡಿಸೆಂಬರ್ 27030 ಹೋರಾಟದ ನಂತರ ನಮ್ಮ ಮೇಲೆ ಹತ್ತಾರು ಪ್ರಕರಣಗಳನ್ನು ಹೂಡಿ ಜೈಲಿಗೆ ಕಳುಹಿಸಲಾಯಿತು. ಆದರೆ ಜೈಲು, ಕೋರ್ಟ್ ಕೇಸು ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಎಂದೂ ಹಂಬುವುದಿಲ್ಲ. ಇಷ್ಟೆಲ್ಲ ಹೋರಾಟದ ನಂತರ ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ನಮ್ಮ ಮೇಲಿದೆ. ರಾಜ್ಯದ ಕೊನೆಯ ನಾಮಫಲಕ ಕನ್ನಡೀಕರಣಗೊಳ್ಳುವವರೆಗೆ ಕನ್ನಡದಲ್ಲಿ ನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಕೈಬಿಡುವ ಪ್ರಶ್ನೆಯೇ ಇಲ್ಲ.

ಭಾಷಾವಾರು ಪ್ರಾಂತ್ಯಗಳ ವಿಂಗಡಣೆ ಆಗಿದ್ದೇ ಆಯಾ ಭಾಗದ ನುಡಿಪರಂಪರೆಯನ್ನು ರಕ್ಷಿಸಲು, ಗೌರವಿಸಲು. ಆದರೆ ಕರ್ನಾಟಕದಲ್ಲಿ ಮಾತ್ರ ಕನ್ನಡಕ್ಕೆ ಅಗೌರವ ಇದನ್ನು ಹೇಗೆ ಸಹಿಸುವುದು. ಯಾಕಾಗಿ ಸಹಿಸುವುದು? ನಾವು ಹಿಂದಿ ರಾಜ್ಯಗಳಲ್ಲಿ ಕನ್ನಡ ನಾಮಫಲಕ ಕೇಳುತ್ತಿದ್ದೇವೆಯೇ? ನಮ್ಮ ನಾಡಿನಲ್ಲೇ ನಮ್ಮ ನುಡಿ ಸೊರಗಬೇಕೇ? ಹೀಗಾಗಿ ಕನ್ನಡದಲ್ಲಿನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಇಡೀ ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಕನ್ನಡ ವಿಧೇಯಕದ ಕುರಿತು ಎಲ್ಲರಿಗೂ ಅರಿವು ಮೂಡಿಸುವ ಕೆಲಸ ಮಾಡಲಿದೆ.

ಕರ್ನಾಟಕ ಸರ್ಕಾರ ಈಗ ಜಾರಿಗೆ ತಂದಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಪ್ರಕಾರ ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೂ ಕನ್ನಡದ ನಾಮಫಲಕವೇ ಶೇ.60ರಷ್ಟು ಭಾಗ ಇರಬೇಕು. ಕನ್ನಡವೇ ಮೊದಲ ಸ್ಥಾನದಲ್ಲಿರಬೇಕು. ಜಾಹೀರಾತು ಫಲಕಗಳು ಕೂಡ ಕನ್ನಡದಲ್ಲಿರಬೇಕು. ಇದನ್ನು ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು ಪಾಲಿಸುವುದು ಕಡ್ಡಾಯವಾಗಿದೆ.

ಈ ನೆಲದ ಕಾಯ್ದೆ ಕಾನೂನು ಪಾಲಿಸದವರು ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲಿ ಕಾನೂನು ಪಾಲಿಸುವ ಮನಸು ಇಲ್ಲದಿದ್ದರೆ ತಮ್ಮ ತಮ್ಮ ರಾಜ್ಯಗಳಿಗೆ ಹೋಗಿಬಿಡಲಿ ಕನ್ನಡಿಗರು ಯಾರ ಅಡಿಯಾಳುಗಳಲ್ಲಿ ನಮ್ಮ ನೆಲದಲ್ಲಿ ನಾವು ಸಾರ್ವಭೌಮರು. ಇದನ್ನು ಎಲ್ಲರಿಗೂ ನೆನಪಿಸುವ ಕಾಲವಿದು ಕನ್ನಡದಲ್ಲಿ ಗ್ರಾಹಕ ಸೇವೆ ಪಡೆಯುವುದು ಕನ್ನಡಿಗನ ಹಣ್ಣು ಯಾರಾದರೂ ನಿರಾಕರಿಸಿದರೆ ಅದನ್ನು ಸಹಿಸಿಕೊಂಡಿರಬೇಡಿ. #ಕನ್ನಡದಲ್ಲಿನಾಮಫಲಕ ಇಲ್ಲದಿದ್ದರೆ ಪ್ರಶ್ನಿಸುವುದನ್ನು

ನಾವು ಯಾವ ಭಾಷೆಯ ವಿರೋಧಿಯಲ್ಲ. ಯಾವ ಭಾಷಿಕರ ವಿರೋಧಿಯೂ ಅಲ್ಲ. ಅದರೆ ಪದೇ ಪದೇ ಕನ್ನಡಕ್ಕೆ, ಕನ್ನಡಿಗರಿಗೆ ಅಪಮಾನ ಆಗುವುದನ್ನು ಸಹಿಸುವುದಿಲ್ಲ. ಕನ್ನಡದಲ್ಲಿನಾಮಫಲಕ ಹಾಕದವರು ಕನ್ನಡದ್ರೋಹಿಗಳು, ನಾಡದ್ರೋಹಿಗಳು ಅವರಿಗೆ ಈ ನಾಡಿನಲ್ಲಿ ಇರುವ ಯೋಗ್ಯತೆ ಇಲ್ಲ. ಇಂಥವರ ವಿರುದ್ಧ ನಮ್ಮ ಹೋರಾಟವೇ ಹೊರತು. ಯಾವುದೇ ಭಾಷೆ ಭಾಷಿಕರ ವಿರುದ್ಧವಲ್ಲ.

ಮಾರ್ಚ್ 5ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಜಾಗೃತಿ ಮೆರವಣಿಗೆಯನ್ನು ನಡೆಸುತ್ತಿದ್ದು, ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು ಸರ್ಕಾರದ ನಿಯಮಾವಳ ಪ್ರಕಾರ ನಾಮಫಲಕಗಳನ್ನು ಬದಲಿಸಬೇಕು ಎಂದು ಹೇಳಿದರು..