suddibindu.in
ಕಾರವಾರ : ಉತ್ತರಕನ್ನಡ ಲೋಕಸಭಾ Uttara Kannada Lok Sabha ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಲ್ಕರ್ (Anjali Nimbalkar,) ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ. ಇದೆ ವಿಚಾರವಾಗಿ ಇಂದು ಶಿರಸಿಯಲ್ಲಿ ಸಿ ಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ (DK Shivakumar,)ಮಾತುಕತ ನಡೆಸಲಿದ್ದಾರೆ.
ಇನ್ನೂ ನಿನ್ನೆ ಬನವಾಸಿಯಲ್ಲಿ ನಡೆದ ಕದಂಬೋತ್ಸವ ಕಾರ್ಯಕ್ರಮಕ್ಕೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳರ್ ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿಯೇ ಹೆಲಿಕ್ಯಾಪ್ಟರ್ ನಲ್ಲಿ ಆಗಮಿಸುವ ಮೂಲಕ ಅಭ್ಯರ್ಥಿಯಾಗುವ ಸಿದ್ಧತೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಅಂಜಲಿ ನಿಂಬಾಲ್ಕರ್ ಅವರಿಗೆ ಸಿಗಲಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:-
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ
ಆದರೆ ಈವರೆಗೆ ಅವರು ಜಿಲ್ಲೆಗೆ ಆಗಮಿಸರಲಿಲ್ಲ.ಟಿಕೇಟ್ ಬಹುತೇಕ ಖಚಿತ ಆಗಿರುವ ಹಿನ್ನಲೆಯಲ್ಲಿ ಮಂಗಳವಾರ ಸಂಜೆ ಹಿರಿಯ ಶಾಸಕರಾದ ಆರ್ ವಿ ದೇಶಪಾಂಡೆ ಹಾಗೂ ಸತೀಶ್ ಸೈಲ್ ಜೊತೆ ನಿಂಬಾಳ್ಳರ್ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಸಿಎಂ ಜೊತೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೇಟ್ ಸಂಭಂದ ಚರ್ಚೆ ಮಾಡಲಾಗಿದ್ದು ಅಂಜಲಿ ನಿಂಬಾಳಕರ್ ಆಯ್ಕೆ ಮಾಡಲು ಜಿಲ್ಲೆಯ ಎಲ್ಲಾ ಶಾಸಕರು ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಿಎಂ ಜೊತೆಯೇ ಆಗಮಿಸಿದ್ದಾರೆ ಎನ್ನಲಾಗಿದೆ.





