First list of Congress candidates released
suddibindu.in
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷದ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ, ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಆನಂದ ಗಡ್ಡದೇವರಮಠ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಹಾಲಿ ಸಂಸದ ಡಿ ಕೆ ಸುರೇಶ, ವಿಜಯಪುರದಿಂದ ರಾಜು ಅಲಗೂರು, ಹಾಸನದಿಂದ ಶ್ರೇಯಸ್ ಪಟೇಲ್, ತುಮಕೂರು ಎಸ್ ಪಿ ಮುದ್ದಹನಮೇಗೌಡ, ಮಂಡ್ಯ ಸ್ಟಾರ್ ಚಂದ್ರು, ಸ್ಪರ್ಧಿಸಲಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.