Suddibindu.in
ಕಾರವಾರ: ಸಂವಿಧಾನ ತಿದ್ದುಪಡಿಯ ವಿಚಾರ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದ್ದಂತೆ ಬಿಜೆಪಿಗೆ ಭಾರಿ ಮುಜುಗರ ಉಂಟಾಗಿದ್ದು,ಅನಂತಕುಮಾರ ಹೇಳಿಗೂ ತಮ್ಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರೆ ಹೇಳಿಕೆ ನೀಡುತ್ತಿದ್ದಾರೆ.ಈ ವಿಚಾರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಂಸದ ಅನಂತಕುಮಾರ ಹೆಗಡೆ ಗಲಿಬಿಲಿಗೊಂಡಿದ್ದು, ಮಾಧ್ಯಮದವರ ವಿರುದ್ಧವೇ ತಿರುಗಿ ಬಿದಿದ್ದಾರೆ. ಪಕ್ಷಕ್ಕೆ ಆಗಿರುವ ಮುಜುಗರ ತಪ್ಪಿಸಲು ಮಾಧ್ಯಮಗಳಿಗೆ ಬೇವರ್ಸಿ ಎಂದು ಅನಂತ ಕುಮಾರ ಹೆಗಡೆ ಮಾಧ್ಯಮದವರ ವಿರುದ್ಧ ಹರಿಹಾಯ್ದಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಮಾಧ್ಯಮಗಳ ವಿರುದ್ದ ಅನಂತ ಕುಮಾರ ಹೆಗಡೆ ವಾಗ್ದಾಳಿ ನಡೆಸಿದ್ದಾರೆ. ಆನೆ ಹೊಗಿದ್ದೆ ದಾರಿ, ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ, ಬೇಕಾದ್ರೆ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ.ಆದರೆ ನಿವೆಲ್ಲ ಇದಕ್ಕೆ ವಿಚಲಿತರಾಗಬೇಕಾಗಿಲ್ಲ ಎಂದು ಅನಂತ ಕುಮಾರ ಹೆಗಡೆ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.
ಇದನ್ನೂ ಓದಿ:-
- ರಾಜ್ಯದ ಜನತೆಗೆ ಬಿಸಿಯಾದ “ನಂದಿನಿ”
- ಲಿಂಗಾಯತ ಶಾಸಕರು ಬಿಜೆಪಿ ತೊರೆದು ಬನ್ನಿ : ಜಯಮೃತ್ಯುಂಜಯ ಸ್ವಾಮೀಜಿ ಕರೆ
- Today gold and silver rate |ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ : ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್
ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು, ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೆನೋ ಹೇಳಿದ್ರು ಅಂತಾ ವಿಚಲಿತರಾಗಬಾರದು,ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು. ಆನೆ ನಡಿತಾ ಇದ್ರೆ ನಾಯಿಗಳು ಬೋಗಳತಾ ಇರ್ತವೆ. ಆನೆ ನಡಿತಾ ಇದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.ಎಂದು ಪ್ರಶ್ನಿಸಿದ್ದಾರೆ. ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡೊಕೆ ಆಗಲ್ಲ ಅಂತಾ, ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ಹೇಳುವ ಮೂಲಕ ಮಾಧ್ಯಮದವರ ವಿರುದ್ಧ ಕಿಡಿಕಾರಿದ್ದಾರೆ.