Supreme ban on 5th, 8th and 9th class board exam
suddibindu.in
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಆರಂಭವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆಯು ಪರೀಕ್ಷೆಗಳನ್ನು ಮುಂದೂಡಿದೆ.ಈ ಆದೇಶ ಹೊರ ಬಿದ್ದ ತಕ್ಷಣದಿಂದ ನಾಳೆ ನಡೆಯಬೇಕಿದ್ದ ಬೋರ್ಡ್ ಪರೀಕ್ಷೆಯನ್ನ ಮುಂದುಡಿರುವ ಬಗ್ಗೆ ಶಾಲಾ ಆಡಳಿತ ಸಮೀತಿ ಪರೀಕ್ಷೆ ಮುಂದುಡಿರುವುದಾಗಿ ವಿದ್ಯಾಗಳಿಗೆ ಮಾಹಿತಿ ನೀಡಿದೆ..
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:-
- ವಾಹನ ಸವಾರರಿಗೆ ಎಚ್ಚರಿಕೆ.! ಹೆದ್ದಾರಿ ಎರಡೂ ತಿಂಗಳು ಬಂದ್
- ಕೋನಳ್ಳಿ ಚಾತುರ್ಮಾಸ್ಯದ ಶ್ರೀಗಳ ಕುಟೀರ ಲೋಕಾರ್ಪಣೆ
- ಮುದಗಾ ಬಳಿ ಕಾರು-ಟಾಟಾ ಏಸ್ ಅಪಘಾತ: ಓರ್ವನಿಗೆ ಗಾಯ
- ಅನಮೋಡ ಘಟ್ಟದಲ್ಲಿ ರಸ್ತೆ ಕುಸಿತ – ಸಂಚಾರ ಸಂಪೂರ್ಣ ಸ್ಥಗಿತ
ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಅವರ ಭವಿಷ್ಯ ಈಗ ಅತಂತ್ರವಾಗಿದೆ. ಇನ್ನು 11 ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5, 8 ಮತ್ತು 9ನೇ ತರಗತಿಗೆ ಮಾರ್ಚ್ 11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.