POCSO case registered against former CM Yeddyurappa
suddibindu.in
ಬೆಂಗಳೂರಿ :ನಗರದ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ(POCSO case)ಎಸಗಿದ ಆರೋಪದ ಮೇಲೆ ದೂರು ದಾಖಲಾಗಿದೆ.
ಯಡಿಯೂರಪ್ಪನವರ (Yeddyurappa) ಮೇಲೆ ಪೋಕ್ಸ್ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿವೆ. ಸಂತ್ರಸ್ತೆಯ ಜೊತೆಗಿದ್ದ ತಾಯಿ ನಿನ್ನೆ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:–
- ಕಲ್ಲೇಶ್ವರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮ
- Dharamsthala/ಧರ್ಮಸ್ಥಳಕ್ಕೆ ಬಂದ ಬುರುಡೆ ದಾಸನ ರಹಸ್ಯ..!!
- PSI/ಪಿಎಸ್ಐ ಪತ್ನಿ ಆತ್ಮಹತ್ಯೆ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2, 2024 ರಂದು ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎನ್ನಲಾಗಿದೆ.ಮಾಜಿ ಸಿಎಂ ಯಡಿಯೂರಪ್ಪ ಪ್ರಸ್ತುತ ಬಿಜೆಪಿಯ ಸಂಸದೀಯ ಮಂಡಲಿ ಸದಸ್ಯರಾಗಿದ್ದಾರೆ