suddibindu.in
ನವದೆಹಲಿ: 2024ರ ಲೋಕಸಭೆ ಚುನಾವಣೆ ನಿಗದಿಯಾಗಿದೆ. ದೇಶಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. .
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2ಹಂತದಲ್ಲಿ ನಡೆಯಲಿದೆ. ಇಂದಿನಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ.ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಇದನ್ನೂ ಓದಿ
- ಯಕ್ಷಗಾನ ಅಕಾಡೆಮಿಯ ಕೇಂದ್ರ ಕಚೇರಿ ಮಂಗಳೂರಿಗೆ ಸ್ಥಳಾಂತರಿಸುವ ಕ್ರಮ ಸರಿಯಲ್ಲ
- ಅನಂತಮೂರ್ತಿ ಹೆಗಡೆ ಪ್ರತಿಭಟನೆಗೆ ಸ್ಥಳದಲ್ಲೆ ಆದೇಶಿಸಿದ ಡಿಸಿ
- ಭಾರತ್ ಸೈನ್ಯಕ್ಕೆ ಬೆಚ್ಚಿಬಿದ್ದ ಪಾಕ್ : 5 ಸಾವಿರ ಸೈನಿಕರ ರಾಜೀನಾಮೆ
ಮೊದಲ ಹಂತ 26ಕ್ಕೆ ಎಲ್ಲೆಲ್ಲಿ ಮತದಾನ?
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ
ಎರಡನೆ ಹಂತದ ಮತದಾನ ಮೇ 7ಕ್ಕೆ ಎಲ್ಲೆಲ್ಲಿ ಮತದಾನ?
ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ದಾವಣಗೆರೆ.
ಇಂದಿನಿಂದ ನೀತಿ ಸಂಹಿತೆ ಜಾರಿ
ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಮಾಡಿದ್ದು, ನೀತಿ ಸಂಹಿತೆ ಇಂದಿನಿಂದ ಜಾರಿಗೆ ಬಂದಿದೆ. ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು ಇದಾಗಿದ್ದು,ಸರ್ಕಾರ ಸಹ ಈ ನೀತಿ ಸಂಹಿತೆಯಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಆದರೆ ಈಗಾಗಲೇ ಪ್ರಾರಂಭವಾಗಿರುವ ಕೆಲಸಗಳನ್ನು ಮುಂದುವರಿಸಬಹುದು. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
ರಾಜಕೀಯ ಪಕ್ಷಗಳಿಗೆ ಅಥವಾ ಅಭ್ಯರ್ಥಿಗಳಿಗೆ ಸೀಮಿತವಾಗಿಲ್ಲ. ಇದು ಸಾಮಾನ್ಯರಿಗೂ ಅನ್ವಯಿಸುತ್ತದೆ. ಯಾರಾದರೂ ತಮ್ಮ ನಾಯಕರ ಪ್ರಚಾರದಲ್ಲಿ ತೊಡಗಿದ್ದರೆ, ಅವರು ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ನಿಯಮಗಳನ್ನು ನಿರ್ಲಕ್ಷಿಸಿ ತಮ್ಮಪರ ಕೆಲಸ ಮಾಡಲು ಯಾವುದೇ ರಾಜಕಾರಣಿ ನಿಮ್ಮನ್ನು ಕೇಳಿದರೆ, ನೀತಿ ಸಂಹಿತೆಯ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಹೇಳುವ ಮೂಲಕ ನೀವು ನಿರಾಕರಿಸಬಹುದು. ಯಾರಾದರೂ ಪ್ರಚಾರ ಮಾಡಿ ಸಿಕ್ಕಿಬಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು.