suddibindu.in
ಬೆಂಗಳೂರು : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಹಗ್ಗಜಗ್ಗಾಟ ಬಹುತೇಕ ಫೈನಲ್ ಆಗಿದೆ ಎನ್ನಲಾಗಿದ್ದು, ಕಾಂಗ್ರೆಸ್ ನಿಂದ ಡಾ. ಅಂಜಲಿ ನಿಂಬಾಳ್ಕರ್ ಹಾಗೂ ಬಿಜೆಪಿಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಫೈನಲ್ ಆಗಿದೆ ಎನ್ನಲಾಗುತ್ತಿದೆ.
ಈಗಾಗಲೆ ಬಿಜೆಪಿ ಹೈಕಮಾಂಡ ತಮ್ಮ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನ ಬಿಡುಗಡೆ ಮಾಡಿದ್ದರೂ ಸಹ ಉತ್ತರಕನ್ನಡ ಇದುವರೆಗೂಬಘೋಷಣೆ ಆಗಿರಲಿಲ. ಆದರೆ ಇದೀಗ ಕೇಂದ್ರ ನಾಯಕರು ಪಟ್ಟಿಯನ್ನ ಸಿದ್ದಮಾಡಿಕೊಂಡಿದ್ದು ಉತ್ತರಕನ್ನಡ ಜಿಲ್ಲೆಯಿಂದ ಮಾಜಿ ಸ್ಪೀಕರ್ ಹಾಗೂ ಶಿರಸಿ ಕ್ಷೇತ್ರದ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಚಿಂತಕ ಚಕ್ರವರ್ತಿ ಸೂಲೆಬೆಲೆ ಅವರ ಹೆಸರು ಕೇಳಿ ಬಂದಿದ್ದು, ಆದರೆ ಸೂಲೆಬೆಲೆ ಅವರಿಗೂ ಸಹ ಈಗಾಗಲೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಕೊನೆಕ್ಷಣದಲ್ಲಿ ಕಾಗೇರಿಯವರ ಹೆಸರು ಅಂತಿಮ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:-
- ಅಪಘಾತ ನಿಯಂತ್ರಣಕ್ಕೆ ಕುಮಟಾದಲ್ಲಿ ಬಿಗ್ ಆಕ್ಷನ್ : ನಿಯಮ ಮೀರಿ ವಾಹನ ಓಡಿಸಿದ್ರೆ ಕಾನೂನು ಕ್ರಮ
- ಸುಗಮವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲು ಎಸ್ಪಿಗೆ ರೂಪಾಲಿ ನಾಯ್ಕ ಮನವಿ
- ದಿನಕರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ
ಇನ್ನೂ ಕಾಂಗ್ರೆಸ್ ಸಹ ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿ ಅಂತಿಮ ಮಾಡಿಕೊಂಡಿದ್ದು, ಖಾನಾಪುರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನ ಅಂತಿಮಗೊಳಿಸುವ ಸಾಧ್ಯತೆ ಇದೆ. ಈ ಪಟ್ಟಿಯನ್ನ ಕಾಂಗ್ರೆಸ್ ಮಾರ್ಚ್ 20ರಂದು ಬಿಡುಗಡೆ ಮಾಡಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.