suddibindu.in
ಬೆಂಗಳೂರು : ರಾಜ್ಯದಲ್ಲಿ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ (Public Exam) ಮಾಡುವಂತೆ ಹೈಕೋರ್ಟ್ ನೀಡಿದ್ದ ತೀರ್ಪು ನೀಡಿದ ಹಿನ್ನಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳು, ಮಾ.11 ಮತ್ತು 12 ರಂದು ಎರಡು ವಿಷಯಗಳ ಪರೀಕ್ಷೆ ಬರೆದಿದ್ದಾರೆ.ಬಳಿಕ ಸುಪ್ರೀಂಕೋರ್ಟ್ (Supreme Court) ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದು, ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ತಜ್ಞನರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ಸಮಸ್ಯೆ ಆಗತ್ತಾ ಇದ್ದರೂ ಶಿಕ್ಷಣ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ.ಇನ್ನೂ ಶಿಕ್ಷಣ ಸಚಿವರು ಮಕ್ಕಳ ಕಾಳಜಿ ಬಿಟ್ಟು ಅಕ್ಕನ ಗೆಲ್ಲಿಸಬೇಕು ಎನ್ನುವುದುದರಲ್ಲೆ ಬ್ಯೂಜಿಯಾಗಿದ್ದಾರೆ. ಮಕ್ಕಳಿಗೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಬೇಕೆ, ಬೇಡವೇ ಎನ್ನುವ ಬಗ್ಗೆ ಸರ್ಕಾರ ಮಾತ್ರ ಆದೇಶ ಹೊರಡಿಸದ ಕಾರಣ ರಾಜ್ಯದ. 20ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗುವಂತಾಗಿದೆ.
ಇದನ್ನೂ ಓದಿ:-
- ಕಂದಾಯ ಅಧಿಕಾರಿಗಳ ಮೈ ಚಳಿ ಬಿಡಿಸಿದ ಆರ್ ವಿ ದೇಶಪಾಂಡೆ
- ರಾಜ್ಯದ ಜನತೆಗೆ ಬಿಸಿಯಾದ “ನಂದಿನಿ”
- ಲಿಂಗಾಯತ ಶಾಸಕರು ಬಿಜೆಪಿ ತೊರೆದು ಬನ್ನಿ : ಜಯಮೃತ್ಯುಂಜಯ ಸ್ವಾಮೀಜಿ ಕರೆ
ಮಾರ್ಚ್ 11ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆಸಲಾಗಿದ್ದು, ಬಳಿಕ ಪರೀಕ್ಷೆಗೆ ತಡೆ ಹಿಡಿಯಲಾಗಿದೆ. 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಬಾಕಿ ಉಳಿದಿದೆ. ಇನ್ನೂ 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ ಉಳಿದಿದೆ. ಬಾಕಿ ಇರುವ ವಿಷಯಗಳ ಪರೀಕ್ಷೆ ಬಗ್ಗೆ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಶಿಕ್ಷಣ ಇಲಾಖೆಯ ವರ್ತನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ. ಆದರೆ ಈ ಬಗ್ಗೆ ತೀರ್ಮಾನಕ್ಕೆ ಬರಬೇಕಾದ ಶಿಕ್ಷಣ ಇಲಾಖೆ ಮೌನವಾಗಿದೆ..