suddibindu.in
Kumta: ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಾಷ್ಟ್ರೀಯ ಡಿವೈಡರಿಗೆ ಡಿಕ್ಕಿ ಹೊಡೆದು, ಕಾರು ಚಾಲಕ ಸೇರಿ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ.ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ರಾಷ್ಟ್ರೀಯ ಹೆದ್ದಾರಿಯಲ್ಲಿ‌ (National Highway) ನಡೆದಿದೆ.

ಅಂಕೋಲಾ ಕಡೆಯಿಂದ‌ ಕುಮಟಾ ಕಡೆ ಚಲಿಸುತ್ತಿದ್ದ ಕಾರು ಚಾಲಕ‌ನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಡಿವೈಡರಿಗೆ ಡಿಕ್ಕಿ ಹೊಡೆದಿದ. ಇದರಿಂದಾಗಿ ‌ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಅಪಘಾತದಿಂದಾಗಿ ಕಾರಿನ ಮುಂಭಾಗ ಪುಡಿಪುಡಿಯಾಗಿದೆ. ಕಾರಿನಲ್ಲಿದ್ದವರು ಮಂಗಳೂರು ಕಡೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ