www.suddibindu.in

ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು.

ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು‌.

ಇದನ್ನೂ ಓದಿ

ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ. ಗೆದ್ದುಬಂದರೆ ತಮ್ಮಿಂದ ಕ್ಷೇತ್ರಕ್ಕೂ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಮತ್ತವರ ಕುಟುಂಬ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ಜಿ.ಪಂ ಮಾಜಿ ಸದಸ್ಯ ಪ್ರದೀಪ್ ನಾಯಕ ದೇವರಭಾವಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಮುಂತಾದವರು ಇದ್ದರು‌.