suddibindu.in
SIRSI: ಶಿರಸಿ: ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಶಿರಸಿ ನಗರದ ಶನಾವುಲ್ಲಾ ಖಾನ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದೆ. ಇದರಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.

ಮನೆಗೆ ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡದಿಂದಾಗಿ ಹತ್ತು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಪಿಎಸ್ಐ ರತ್ನಾ ಕುರಿ ಭೇಟಿ,