suddibindu.in
ಕುಮಟಾ : ಉತ್ತರಕನ್ನಡ(uttara Kannada) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳ ಜೊತೆ ಮೆರೆವಣಿಗೆ ನಡೆಸಿ ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.
- ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ
- ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ
- ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ — ಹೆದ್ದಾರಿ ತಡೆದು ಆಕ್ರೋಶ
ಈ ವೇಳೆ ಕುಮಟಾ(kumta) ಕ್ಷೇತ್ರದ ಮಿರ್ಜಾನ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಪ್ರದೀಪ ನಾಯಕ ದೇವರಬಾವಿ ಸಹ ತಮ್ಮ ಕ್ಷೇತ್ರದಿಂದ ನೂರಾರು ಕಾರ್ಯಕರ್ತರನ್ನ ಡಾ. ಅಂಜಲಿ ನಿಂಬಾಳ್ಕರ್ ಅವರ ನಾಮಪತ್ರ ಸಲ್ಲಿಕೆಗೆ ಕರೆದೊಯ್ಯುವ ಮೂಲಕ ಕ್ಷೇತ್ರದಲ್ಲ ಕಾಂಗ್ರೆಸ್ ಸಂಘಟನೆ ಗಟ್ಟಿಯಾಗಿದೆ ಎನ್ನುವುದನ್ನ ತೋರಿಸಿದ್ದಾರೆ.

ಮಿರ್ಜಾನ ಜಿಲ್ಲಾ ಪಂಚಾಯತ ವ್ಯಾಪ್ತಿಯ ಗೋಕರ್ಣ,(Gokarna) ಮಿರ್ಜಾನ, ಕೋಡ್ಕಣಿ, ಬರ್ಗಿ, ಹಿರೇಗುತ್ತಿ. ತೋರ್ಕೆ, ಗಂಗಾವಳಿ, ಈ ಎಲ್ಲಾ ಭಾಗದಿಂದಲ್ಲೂ ತಮ್ಮ ಹಾಗೂ ಕಾಂಗ್ರೆಸ್ನ ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಡಾ. ಅಂಜಲಿ ನಿಂಬಾಳ್ಕರ್ ಅವರ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಪಾಲ್ಗೊಳ್ಳುವ ಮೂಲಕ ಗಮನಸೆಳೆದಿದ್ದಾರೆ.







