suddibindu.in
ಕುಮಟಾ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಜಕೀಯ ನಿವೃತ್ತಿ ಪಡೆದಿದ್ದ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಮಾತೃ ಪಕ್ಷಕ್ಕೆ ಮರಳಿದ್ದು, ನಾಳೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆಯಲಾಗಿದೆ.
ಲೋಕಸಭಾ ಚುನಾವಣೆಯ ಹೊತ್ತಲ್ಲಿ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಸಮುಖದಲ್ಲಿಂದು ಕಾಂಗ್ರೆಸ್‌ಗೆ ಮರಳಿದ್ದಾರೆ.ಇನ್ನೂ ಈ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನ ಚುರುಕುಗೊಳಿಸಬೇಕೆನ್ನುವ ಕಾರಣಕ್ಕಾಗಿ ನಾಳೆ (ಶನಿವಾರ) ಬೆಳಿಗ್ಗೆ 10ಗಂಟೆಗೆ ತಮ್ಮ ನಿವಾಸದಲ್ಲಿ ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಇದನ್ನೂ ಓದಿ
- ಮೃತ ಆಕಳನ್ನು ಟ್ರ್ಯಾಕ್ಟರಿಗೆ ಕಟ್ಟಿ ಎಳೆದೊಯ್ದ, ವಿಡಿಯೋ ವೈರಲ್
- ಕುಮಟಾ ತಾಲೂಕಾ ಘಟಕದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರಮೋದ ನಾಯ್ಕ ಅಯ್ಕೆ
- ದಾಂಡೇಲಿಯಲ್ಲಿ ದೊಣ್ಣೆಯಿಂದ ವ್ಯಕ್ತಿ ಓರ್ವನ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು
ಈಹಿನ್ನಲೆಯಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಭೆಗೆ ಆಗಮಿಸುವಂತೆ ಕರೆ ನೀಡಿದ್ದಾರೆ. ಹೀಗಾಗಿ ನಾಳೆ ನಡೆಯುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಆಗಮಿಸುವ ನಿರೀಕ್ಷೆ ಇದೆ.