suddibindu.in
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆ ಉಂಟಾಗುತ್ತಿದ್ದು, ಜಿಲ್ಲೆಯಲ್ಲಿ ಮಳೆ ವಾತಾವರಣ ಉಂಟಾಗಿದೆ. ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸುಚನೆ ‌ನೀಡಿದೆ.

ಏಪ್ರಿಲ್ 20 ರಿಂದ 22ರ ವರೆಗೆ ಜಿಲ್ಲೆಯ ಕರಾವಳಿ,ಮಲೆನಾಡು ತಾಲೂಕಿನ‌ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.