suddibindu.in
ಕುಮಟಾ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರ ಉಳಿದಿದ್ದ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಮರಳಿ ಮಾತೃ ಪಕ್ಷಕ್ಕೆ ಮರಳಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ಇಂದು ಸಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರ ಸಮುಖದಲ್ಲಿ ಶಾರದಾ ಶೆಟ್ಟಿ ಮರಳಿ ಕಾಂಗ್ರೆಸ್‌ಗೆ ಏಂಟ್ರಿಯಾಗಿದ್ದಾರೆ. ಅವರು ಕಳೆದ ಚುನಾವಣೆ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದರೂ ಸಹ ಬೇರೆ ಯಾವುದೇ ಪಕ್ಷದ ಜೊತೆ ಕೈ ಜೋಡಿಸಿರಲಿಲ್ಲ..
ಇದನ್ನೂ ಓದಿ
- ವಾಹನ ಸವಾರರಿಗೆ ಎಚ್ಚರಿಕೆ.! ಹೆದ್ದಾರಿ ಎರಡೂ ತಿಂಗಳು ಬಂದ್
- ಕೋನಳ್ಳಿ ಚಾತುರ್ಮಾಸ್ಯದ ಶ್ರೀಗಳ ಕುಟೀರ ಲೋಕಾರ್ಪಣೆ
- ಮುದಗಾ ಬಳಿ ಕಾರು-ಟಾಟಾ ಏಸ್ ಅಪಘಾತ: ಓರ್ವನಿಗೆ ಗಾಯ
ರಾಜೀನಾಮೆ ಬೆದರಿಕೆ
ಶಾರದಾ ಶೆಟ್ಟಿ ಕಾಂಗ್ರೆಸ್ ಸೇರಿದರೆ ಸದ್ಯ ಕುಮಟಾದಲ್ಲಿ ಕಾಂಗ್ರೆಸ್ ಹೊಣೆ ಹೊತ್ತ ನಾಯಕನೋರ್ವ ಪಕ್ಷದ ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಆದರೆ ಕಳೆದ ಚುನಾವಣೆಯಲ್ಲಿ ಇದೇ ಮುಖಂಡನಿಂದ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿರುವುದರಿಂದ ಪಕ್ಷದ ನಾಯಕರು ಈತನ ರಾಜೀನಾಮೆ ಬೆದರಿಕೆಗೆ ಕ್ಯಾರೆ ಎಂದಿಲ್ಲ ಎನ್ನಲಾಗಿದೆ. ಸದ್ಯ ತನ್ನ ಪ್ರಭಾವ ಬಳಸಿ ಶಾರದಾ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯನ್ನ ತಡೆಯಲು ಇದೇ ನಾಯಕ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಕ್ಷೇತ್ರದ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಳರ್ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಮೇ 3 ರಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಇದೇ ವೇಳೆ ಇನ್ನಷ್ಟು ಪ್ರಮುಖರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆಂದು ತಿಳಿದು ಬಂದಿದೆ.
‘