suddibindu.in
Kumta:ಕುಮಟಾ: ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.
ಜಿಲ್ಲೆಯ ಕುಮಟಾ,ಅಂಕೋಲಾ,ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಮೊಡಕವಿದ ವಾತಾವಣ ಇತ್ತು.ವಿಪರೀತವಾದ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪಾಗಿಸಿದ ವರುಣ ತಂಪೆರೆದಿದೆ.ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರಿಸಿತ್ತು. ಇಂದು ಬೆಳ್ಳಂಬೆಳಿಗ್ಗೆ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆ ಸುರಿಯುತ್ತಿದ್ದು ತಂಪೆರೆದಿದೆ..
ಇದನ್ನೂ ಓದಿ
- ಸಿಎಂ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆ ದಾಖಲು
- ನ 20ಕ್ಕೆ ಕಾರವಾರದಲ್ಲಿ ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಸಮಾವೇಶ
- ಟೆಂಪೋ–ಟಿಪ್ಪರ್ ನಡುವೆ ಅಪಘಾತ, 12 ಪ್ರಯಾಣಿಕರಿಗೆ ಗಾಯ
ಇನ್ನೂ ಜಿಲ್ಲೆಯಲ್ಲಿ ಎಪ್ರಿಲ್ 22ರ ವರೆಗೆ ಮಳೆ ಉಂಟಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಉಂಟಾಗುತ್ತಿದೆ.ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗಲಿದೆ ಎಂದು ಈಗಾಗಲೇ ಹವಮಾನ ಇಲಾಖೆ ಸೂಚನೆ ನೀಡಿದೆ.





