suddibindu.in
ಅಂಕೋಲಾ : ಬೆಳಿಗ್ಗೆ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮಾವಿನ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರೂರಿನಲ್ಲಿ ನಡೆದಿದ್ದು, ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಶನಿವಾರ ಬೆಳಿಗ್ಗೆ ಸುರಿದ ಅಕಾಲಿಕ ಮಳೆಯಿಂದ ಶಿರೂರಿನ ತಿಮ್ಮ ಗೌಡ ಎಂಬುವವರ ಮನೆ ಮೇಲೆ ಬೃಹತ್ ಗಾತ್ರದ ಮಾವಿನ ಮರವೊಂದು ಮುರಿದು ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿ ಐವರು ವಾಸವಾಗಿದ್ದು, ಮನೆ ಮೇಲೆ ಮರ ಬಿದ್ದಿರುವ ಸಂದರ್ಭದಲ್ಲಿ ಯಾರು ಮನೆಯೊಳೆ ಇರಲಿಲ್ಲ. ಎಲ್ಲರೂ ಕೃಷಿ ಕೆಲಸಕ್ಕಾಗಿ ಹೊರಗಡೆ ಹೋಗಿದ್ದು, ಇದರಿಂದಾಗಿ ಐವರು ಸಹ ಪ್ರಾಣಾಪಾಯದಿಂದ ಪರಾಗಿದ್ದಾರೆ.

ಮರ ಬಿದ್ದ ರಭಸಕ್ಕೆ ಮೇಲ್ಛಾವಣಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮನೆಯಲ್ಲಿದ್ದ ಬತ್ತ ಸೇರಿದಂತೆ ಎಲ್ಲಾ ಸಾಮಗ್ರಿಗಳು ನೀರುಪಾಲಾಗಿದೆ. ಅನಾಹುತದಿಂದಾಗಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.ಇದರಿಂದಾಗಿ ಕುಟುಂಬಸ್ಥರು ಕಂಗಾಲಾಗುವಂತಾಗಿದೆ. ಘಟನೆ ಸುದ್ದಿ ತಿಳಿದ ಅಂಕೋಲಾ ತಾಲೂಕ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸುನೀಲ್ ಎಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಲಕಂಠ ನಾಯಕ, ಗ್ರಾಮ ಲೆಕ್ಕಾಧಿಕಾರಿ ಸಿ ಎನ್ ಗುನಗಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ