suddibindu.in
sirsi:ಶಿರಸಿ : ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಪ್ರಧಾನಿ ನರೇಂದ ಮೋದಿ ಅವರು ಏಪ್ರೀಲ್ 28ರಂದು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ 28ರಂದು ಪ್ರಧಾನಿ ಮೋದಿ ಅವರು ಜಿಲ್ಲೆಗೆ ಅಗಮಿಸಲಿದ್ದು, ಅಂದು ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ‌.ಸಮಾವಶಕ್ಕೂ ಪೂರ್ವದಲ್ಲಿ ನಗರದಲ್ಲಿ ‌ರ‌್ಯಾಲಿ ನಡೆಸಲಿದ್ದಾರೆ.ಸಮಾವೇಶದಲ್ಲಿ 1ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಪ್ರಧಾನಿಯಾದ ನಂತರ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸಲಿದ್ದು, ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ. ಕಿತ್ತೂರ, ಖಾನಾಪುರ ಒಳಗೊಂಡ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ 1 ಲಕ್ಷ ಕಾರ್ಯಕರ್ತರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ.

ಇದನ್ನೂ ಓದಿ

ಏ.28ರಂದು ಕರ್ನಾಟಕದ ಶಿರಸಿ, ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.ನಂತರದಲ್ಲಿ ಬೆಳಿಗ್ಗೆ 11 ಘಂಟೆಗೆ ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮೊದಲ ಹಂತದಲ್ಲಿ ಮಠ-ಮಂದಿರಗಳಿಗೆ ಭೇಟಿ ನೀಡಿ, ಸಮುದಾಯದ ಸಭೆ, ಗಣ್ಯರ ಸಭೆ, ಕಿತ್ತೂರು, ಖಾನಾಪುರ ಒಳಗೊಂಡಂತೆ 8 ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಆಗ ಸೇರಿದ್ದ ಕಾರ್ಯಕರ್ತರು ನಮ್ಮ ಅಭ್ಯರ್ಥಿಯು ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಲು ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
79 ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಚಾರ ಸಭೆ ಪ್ರಾರಂಭಿಸಲಾಗಿದ್ದು, 48 ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಚಾರ ಸಭೆ ಮುಗಿಸಲಾಗಿದ್ದು, ಪ್ರತಿಯೊಂದು ಕಡೆಗಳಲ್ಲಿಯೂ ಉತ್ತಮ ಬೆಂಬಲ ದೊರೆಯುತ್ತಿದೆ ಎಂದು ಹೇಳಿದರು.

ಕ್ಷೇತ್ರದ 2 ಸಾವಿರ ಬೂತ್‌ಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕೇಂದ್ರ ಸರ್ಕಾರದ ಸಾಧನೆ ತಿಳಿಸುವ ದೃಷ್ಟಿಯಿಂದ ಮನೆ ಮನೆ ಸಂಪರ್ಕ ಮಾಡುತ್ತಿದ್ದಾರೆ.ಎರಡೆನೆಯ ಹಂತದಲ್ಲಿ ವಿಶೇಷ ಸಂಪರ್ಕ ಅಭಿಯಾನದ ಮೂಲಕ ಪಕ್ಷದ ಪ್ರನಾಳಿಕೆ, ಅಭ್ಯರ್ಥಿಯ ಮಾದರಿ ಮತಪತ್ರ ಹಿಡಿದು ಮನೆ ಮನೆ ಸಂಪರ್ಕ ಮಾಡುತ್ತೇವೆ. ಒಟ್ಟಿನಲ್ಲಿ ಮಹಾಸಮರಕ್ಕೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾ ಸಂಚಾಲಕ ಉಪೇಂದ್ರ ಪೈ ಮಾತನಾಡಿ, ಜಿಲ್ಲೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಜತೆ ಪ್ರಚಾರಕ್ಕೆ ತೆರಳಿ, ಕೇಂದ್ರ ಸರ್ಕಾರದ ಸಾಧನೆ ಹೇಳುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ವಾತಾವರಣ ಸೃಷ್ಟಿಯಾಗಿದ್ದು, ಮೈತ್ರಿ ಅಭ್ಯರ್ಥಿ ಪ್ರಚಂಡ ಬಹುಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ, ಸುಖಾಸುಮ್ಮನೆ ಅಧಿಕಾರಿ ದುರುಪಯೋಗಪಡಿಕೊಳ್ಳುವ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದೆ. ಅದನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ, ಪಕ್ಷದ ಪ್ರಮುಖರಾದ ಗೋವಿಂದ ನಾಯ್ಕ ಭಟ್ಕಳ, ಶಿವಾಜಿ ನರಸಾನಿ, ಆರ್.ವಿ.ಹೆಗಡೆ ಚಿಪಗಿ ಇದ್ದರು.